Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

---Advertisement---

 

 

ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿಪಿ ಯೋಗೀಶ್ವರ್ ತುದಿಗಾಲಿನಲ್ಲಿ ನಿಂತಿದ್ರೆ, ಅತ್ತ ನಿಖಿಲ್ ಕುಮಾರಸ್ವಾಮಿ ಅವರು ನಿಲ್ತಾರೆ ಎಂಬ ಮಾತು ಇತ್ತು. ಇದೀಗ ಆ ವಿಚಾರಕ್ಕೊಂದು ಅಧಿಕೃತ ಮುದ್ರೆ ಬಿದ್ದಿದೆ. ರಾಮನಗರದ ತೋಟದ ಮನೆಯಲ್ಲಿ ಇಂದು ಕುಮಾರಸ್ವಾಮಿ ಅವರು ಕರೆದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂದು ಜೆಡಿಎಸ್ ನ ಪ್ರಮುಖ ನಾಯಕರ ಸಭೆ ಕರೆಯಲಾಗಿತ್ತು. ಇದರಲ್ಲಿ ಚನ್ನಪಟ್ಟಣದ ಅಭ್ಯರ್ಥಿಯ ಬಗ್ಗೆ ಸಾಕಷ್ಟು ವಿಚಾರಗಳನ್ನು ಚರ್ಚಿಸಲಾಯ್ತು. ಬಳಿಕ ಜೆಡಿಎಸ್ ನಾಯಕರೆಲ್ಲ ಒಟ್ಟಿಗೆ ಸೇರಿ ಒಂದು ನಿರ್ಧಾರಕ್ಕೆ ಬಂದರು. ಈ ಬಾರಿಯ ಬೈಎಲೆಕ್ಷನ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ನಿಲ್ಲಿಸಬೇಕೆಂದುಕೊಂಡಿದ್ದಾರೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿರುವ ಯೋಗೀಶ್ವರ್ ಅವರ ಮನವೊಲಿಸಿ, ಕ್ಷೇತ್ರ ಉಳಿಸಿಕೊಳ್ಳುವುದಕ್ಕೆ ಪ್ಲ್ಯಾನ್ ಮಾಡಿದ್ದಾರೆ. ಇದೆಲ್ಲವನ್ನು ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾನಕ್ಕೆ ಬರಲಿದ್ದಾರೆ.

ಸದ್ಯ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದರಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ನಿಲ್ಲಿಸಲಿದ್ದು, ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ನಿಲ್ಲದೆ ಹೋದರೆ ಅನಿತಾ ಅವರನ್ನು ಸ್ಪರ್ಧೆಗಿಳಿಸಬೇಕೆಂಬ ಯೋಜನೆ ರೂಪಿಸಿದ್ದಾರೆ. ಮುಖ್ಯವಾಗಿ ಇಲ್ಲಿ ಸಿಪಿ ಯೋಗೀಶ್ವರ್ ಅವರ ಮನವೊಲಿಕೆ ಮಾಡುವುದೇ ಕುಮಾರಸ್ವಾಮಿ ಅವರಿಗೆ ದೊಡ್ಡ ಸವಲಾಗಿದೆ. ಟಿಕೆಟ್ ಕೊಟ್ಟೆ ಕೊಡುತ್ತಾರೆ, ನಾನೇ ಅಭ್ಯರ್ಥಿ ಎನ್ನುತ್ತಿರುವ ಸಿಪಿ ಯೋಗೀಶ್ವರ್ ಸಮಾಧಾನಗೊಳ್ಳುತ್ತಾರಾ ಅಥವಾ ಸ್ವತಂತ್ರ ಅಭ್ಯರ್ಥಿಯಾಗ್ತಾರಾ ನೋಡ್ಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment