ಮುಸೋರಿ: ಈಗಾಗಲೇ ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಹೊರಟಿದ್ದಾರೆ. ಆದರೆ ದಾರಿ ಮಧ್ಯೆ ಅನಾರೋಗ್ಯದ ಸಮಸ್ಯೆಯಿಂದಾಗಿ ಈಗಾಗಲೇ 48 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಇದೀಗ ಹೆದ್ದರಿ ಕುಸಿತದಿಂದಾಗಿ ಸಾವಿರಾರು ಜನ ತೊಂದರೆಗೆ ಸಿಲುಕಿದ್ದಾರೆ.
ರಾಣಾ ಚಟ್ಟಿ ಮತ್ತು ಸಯನಾ ಚಟ್ಟಿ ನಡುವಿನ ಯಮನೋತ್ರಿ ಹೆದ್ದಾರಿ ಕುಸಿತ ಕಂಡಿದ್ದು, ಧಾಮದ ಕಡೆ ಹೊರಟ ಸುಮಾರು 3 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಾರ್ಗಮಧ್ಯೆಯೇ ಸಿಲುಕಿದ್ದಾರೆ. ಬಸ್ಸು ಮತ್ತು ದೊಡ್ಡಗಾತ್ರದ ವಾಹನಗಳು ಹೋಗಲು ಸಾಧ್ಯವಾಗುತ್ತಿಲ್ಲ. ಆದರೆ ಸಣ್ಣಮಟ್ಟದ ವಾಹನಗಳು ಸಂಚರಿಸುತ್ತಿವೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಕುಸಿದಿರುವ ಹೆದ್ದಾರಿ ದುರಸ್ಥಿ ಕಾರ್ಯ ಆರಂಭವಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಗಳು ಸೇರಿದಂತೆ ಹಕವು ವಾಹನದಲ್ಲಿ 15 ಕಾರ್ಮಿಕರು ಸ್ಥಳಕ್ಕೆ ಆಗಮಿಸಿ, ಕೆಲಸ ಶುರು ಮಾಡಿದ್ದಾರೆ. ಸದ್ಯ ಬಸ್ಸುಗಳಲ್ಲಿ ಹೋದ ಪ್ರಯಾಣಿಕರು ಮುಂದೆ ಸಂಚರಿಸಲು ಸಾಧ್ಯವಾಗದೆ ಇದ್ದಲ್ಲಿಯೇ ಲಾಕ್ ಆಗಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…