Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

Facebook
Twitter
Telegram
WhatsApp

ಬೆಂಗಳೂರು, ನವೆಂಬರ್‌ 4, 2024*: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ.

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ- 1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರ್ಕಾರ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

ಇವಿ ಚಾರ್ಚಿಂಗ್‌ ಸ್ಟೇಷನ್‌ಗಳ ಜತೆಗೆ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುವಲ್ಲಿ ‘ಇವಿ ಮಿತ್ರ’ ಆ್ಯಪ್‌ ಪಾತ್ರವೂ ದೊಡ್ಡದು. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

 

ಇವಿ ಸ್ಟೇಷನ್‌ಗಳ ವಿವರ :
ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 5765
ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 195
ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 70
ಸರ್ಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಚಿಂಗ್ ಸ್ಟೇಷನ್‌ಗಳು: 21
ಖಾಸಗಿ ಚಾರ್ಚಿಂಗ್ ಸ್ಟೇಷನ್‌ಗಳು: 5479

 

“ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಚಿಂಗ್‌ ಮೂಲ ಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ. ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ 2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ.
-ಕೆ.ಜೆ. ಜಾರ್ಜ್‌, ಇಂಧನ ಸಚಿವರು

“ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್‌ ಏಜೆನ್ಸಿಯಾಗಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಪ್ರಶಸ್ತಿ ಸಂದಿರುವುದು ಅತ್ಯಂತ ಹೆಮ್ಮೆ ಸಂಗತಿ. ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕರ್ನಾಟಕ ದಿಕ್ಸೂಚಿಯಾಗಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ವಾಹನಗಳಿಗೆ ಚಾರ್ಚಿಂಗ್‌ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ
ಮಹಾಂತೇಶ ಬಿಳಗಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಮಾರಸ್ವಾಮಿ ಮೇಲೆ ಎಫ್ಐಆರ್: ಕೇಂದ್ರ ಸಚಿವ ಹೆಚ್ಡಿಕೆ ಶಾಕಿಂಗ್ ರಿಯಾಕ್ಷನ್..?

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ನಡುವೆಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಕುಮಾರಸ್ವಾಮಿ

ಫೋಟೋಗಳನ್ನು ನೋಡಿ ಮೊದಮೊದಲು ಅತ್ತಿದ್ದೆ : ಕೆಟ್ಟ ಟ್ರೋಲ್ ಬಗ್ಗೆ ಮಾನಸ ಸ್ಟ್ರಾಂಗ್ ಟಾಕ್

ಬಿಗ್ ಬಾಸ್ ಸೀಸನ್ 11ರ ಬಹುನಿರೀಕ್ಷಿತ ಸ್ಪರ್ಧಿಯಾಗಿ ಮಾನಸ ಮನೆಯೊಳಗೆ ಎಂಟ್ರಿಯಾಗಿದ್ದರು. ಬಿಗ್ ಬಾಸಚ ಮಾನಸ ವೇದಿಕೆ ಮೇಲೆ ಮಾಡುತ್ತಿದ್ದ ಕಾಮಿಡಿ, ಆ ಕ್ಷಣಕ್ಕೆ ಕೊಡುತ್ತಿದ್ದ ಟಾಂಟ್ ಎಲ್ಲವೂ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಜನರ

ಇಂದು ಕೂಡ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ :ಎಷ್ಟಿದೆ ಇವತ್ತಿನ ರೇಟ್..?

ಚಿನ್ನ ಬೆಳ್ಳಿ ಬೆಲೆಯಲ್ಲಿ ಏರುವಾಗ ನೂರಾರು ರುಪಾಯಿ ಏರುತ್ತದೆ. ಇಳಿಯುವಾಗ ಒಂದೆರಡು ರೂಪಾಯಿಯಲ್ಲಿ ಇದೆ ಚಿನ್ನಾಭರಣ ಪ್ರಿಯರ ಬೇಸರ. ದೀಪಾವಳಿ ಹಬ್ಬದಲ್ಲಿ ಇದ್ದಕ್ಕಿದ್ದ ಹಾಗೇ ಚಿನ್ನ ಗಗನಕ್ಕೆ ಜಿಗಿದಿತ್ತು. ಈಗ ಕೊಂಚ ಕೊಂಚವೇ ಇಳಿಕೆಯಾಗುತ್ತಿದೆ.

error: Content is protected !!