
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಗೆ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಯಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ತೀರ್ಪು ಪ್ರಕಟವಾಗಿದೆ. 8 ಪ್ರಕರಣಗಳಿಗೆ ಸಂಬಂಧಿಸಿದಂತೆ ತಲಾ 6 ತಿಂಗಳಿನಂತೆ ಒಟ್ಟು ನಾಲ್ಕು ವರ್ಷ ಶಿಕ್ಷೆ ಪ್ರಕಟವಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ಪ್ರಕಟವಾಗಿದೆ. ಹೂವಪ್ಪ ಎಂಬುವವರಿಂದ ಎಂ ಪಿ ಕುಮಾರಸ್ವಾಮಿ 1.35 ಕೋಟಿ ಹಣ ಸಾಲ ಪಡೆದುಕೊಂಡಿದ್ದರು. ಈ ಹಣಕ್ಲಾಗಿ ಸುಮಾರು ಎಂಟು ಚೆಕ್ ಗಳನ್ನು ಕುಮಾರಸ್ವಾಮಿ ನೀಡಿದ್ದರು. ಆದರೆ ನೀಡಿದ್ದ ಚೆಕ್ ಗಳು ಬೌನ್ಸ್ ಆಗಿದ್ದು, ಶಿಕ್ಷೆಗೆ ಗುರಿಯಾಗಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂವಪ್ಪ ಕೇಸ್ ಹಾಕಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಕುಮಾರಸ್ವಾಮಿ ಅವರಿಗೆ ಶಿಕ್ಷೆ ಪ್ರಕಟಿಸಿದೆ.

GIPHY App Key not set. Please check settings