ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 42ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿತ್ತು. ಹೂವಪ್ಪ ಗೌಡ ಎಂಬುವವರು ಕೇಸ್ ಹಾಕಿದ್ದರು. ಆದರೆ ಎಷ್ಟೇ ಸಲ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಬದಲಿಗೆ ಅನಾರೋಗ್ಯದ ಕಾರಣವನ್ನು ನೀಡುತ್ತಾ ಬಂದಿದ್ದರು. ವಿಚಾರಣೆಗೆ ಹಾಜರಾಗದೆ ಅಲ್ಲಿ ಇಲ್ಲಿ ಫಂಕ್ಷನ್ ಗಳನ್ನು ಅಟೆಂಡ್ ಮಾಡುತ್ತಿದ್ದರು.
ಈ ಸಂಬಂಧ ಅರ್ಜಿದಾರ ಹೂವಪ್ಪ ಗೌಡ ಕೋರ್ಟ್ಗೆ ಅನೇಕ ಸಾಕ್ಷಿಗಳನ್ನು ನೀಡಿದ್ದರು. ಶಾಸಕ ಕುಮಾರಸ್ವಾಮಿ ಆರೋಗ್ಯವಾಗಿಯೇ ಇದ್ದಾರೆ ಎಂದು ಅದಕ್ಕೆ ಬೇಕಾದ ಎಲ್ಲಾ ಪುರಾವೆಗಳನ್ನು ಕೋರ್ಟ್ ಗೆ ಸಲ್ಲಿಸಿದ್ದರು. ಈ ಸಂಬಂಧ ಪರಿಶೀಲನೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜಾಮೀನು ರಹಿತ ವಾರೆಂಟ್ ನೀಡಿದೆ.