Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೆನ್ನಮ್ಮ ಪಾರ್ಥಿವ ಶರೀರ ಅಂತಿಮ ಯಾತ್ರೆ : ಇಲ್ಲಿದೆ ಮಾರ್ಗದ ವಿವರ

---Advertisement---

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆಯು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರದವರೆಗೆ ನಡೆಯಲಿದೆ.

ಬೆಂಗಳೂರಿನ ಪದ್ಮನಾಭನಗರದಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನ ಪಡೆಯಲು ಅನುಕೂಲವಾಗುವಂತೆ ಬೆಂಗಳೂರಿನಿಂದ ಹೊಳೆನರಸೀಪುರದವರೆಗಿನ ಮಾರ್ಗ ಮಧ್ಯೆ ಒಟ್ಟು 10 ಪ್ರಮುಖ ಸ್ಥಳಗಳಲ್ಲಿ ದರ್ಶನಕ್ಕೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.

ಅಂತಿಮ ಯಾತ್ರೆ ಸಾಗುವ ಪ್ರಮುಖ ಮಾರ್ಗಗಳು
ಬೆಂಗಳೂರಿನಿಂದ ಹೊರಟಿರುವ ಅಂತಿಮ ಯಾತ್ರೆಯು ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಎಲೆಯೂರು (ಉದಯಪುರ), ಶಾಂತಿಗ್ರಾಮ, ಬೂವನಹಳ್ಳಿ ಕ್ರಾಸ್, ಹಾಸನ ಡೈರಿ ಸರ್ಕಲ್, ಎನ್ ಆರ್ ಸರ್ಕಲ್ ಹಾಗೂ ಮೊಸಳೆ ಹೊಸಹಳ್ಳಿ ಮಾರ್ಗವಾಗಿ ಹೊಳೆನರಸೀಪುರವನ್ನು ತಲುಪಲಿದೆ.

ಇಂದು ಮತ್ತು ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಇಂದು ರಾತ್ರಿ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇದಾದ ಬಳಿಕ, ನಾಳೆ ಅಂದರೆ ಜುಲೈ 20ರ ಸೋಮವಾರ ಬೆಳಗ್ಗೆ 7:00 ಗಂಟೆಯಿಂದ 9:30 ಗಂಟೆಯವರೆಗೆ ಮತ್ತೊಮ್ಮೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಕಾಲಾವಕಾಶ ನೀಡಲಾಗಿದೆ.

ನಾಳೆ ಮಧ್ಯಾಹ್ನ ಕ್ಯಾತನಹಳ್ಳಿಯಲ್ಲಿ ಅಂತ್ಯಕ್ರಿಯೆ
ನಾಳೆ ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು. ಬೆಳಗ್ಗೆ 11:30ರ ಸುಮಾರಿಗೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಕ್ಯಾತನಹಳ್ಳಿಗೆ ಪಾರ್ಥಿವ ಶರೀರ ತಲುಪಲಿದೆ. ತದನಂತರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4:15ರ ಅವಧಿಯಲ್ಲಿ ಕುಟುಂಬದ ಸಂಪ್ರದಾಯ ಹಾಗೂ ವಿಧಿವಿಧಾನಗಳ ಪ್ರಕಾರ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join WhatsApp

Join Now

Join Telegram

Join Now