ಬೆಂಗಳೂರು: ಎಂಇಎಸ್ ಪುಂಡರ ಪುಂಡಾಟಿಕೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿರುವ ಶಿವಾಜಿ ಪ್ರತಿಮೆಗಳಿಗೆ ಭದ್ರತೆ ಹೆಚ್ವಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜೊತೆಗೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದಿಂದ ಬರುವ ಬಸ್ ಗಳಿಗೂ ಭದ್ರತೆ ನೀಡಲು ಸೂಚನೆ ನೀಡಲಾಗಿದೆ.
ಕರವೇ ಕಾರ್ಯಕರ್ತರು ಈಗಾಗಲೇ ಈ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಬೆಳಗಾವಿಯ ಸುವರ್ಣಸೌಧಕ್ಕೆ ಸೋಮವಾರ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಚೆನ್ನಮ್ಮ ಸರ್ಕಲ್ ನಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ನಡೆಸಿ, ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ಇತ್ತ ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಾಠ ಸಮುದಾಯದವರು ರೊಚ್ಚಿಗೆದ್ದಿದ್ದರು. ನಾಳೆ ಪ್ರತಿಭಟನೆ ಮಾಡೋದಾಗಿ ತಿಳಿಸಿದ್ದರು. ಪೊಲೀಸರು ಮರಾಠರನ್ನ ಕರೆಸಿ, ಶಾಂತಿಸಭೆ ನಡೆಸಿ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ.