ಚಿತ್ರದುರ್ಗ. ಅ.16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚಿತ್ರದುರ್ಗ ಜಿಲ್ಲಾ ಘಟಕದ 2025-28ನೇ ಅವಧಿಯ ಚುನಾವಣೆ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ನೇಮಕವಾಗಿದ್ದು, ಚುನಾವಣಾ ಕಚೇರಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಇದುವರೆಗೂ ಕರ್ತವ್ಯನಿರ್ವಹಿಸಿದ್ದು, ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ, ಇವರ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











