Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿತ್ರದುರ್ಗ ಜಿಲ್ಲೆಗೆ ವೈದ್ಯಕೀಯ ಕಾಲೇಜು ಸೇರಿದಂತೆ ಅನೇಕ ಯೋಜನೆಗಳನ್ನು  ನೀಡಿದ್ದಾರೆ : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮಾ.04) : ರಾಜ್ಯದ ಮುಖ್ಯಮಂತ್ರಿಗಳು ದಲಿತರಿಗೆ, ಪರಿಶಿಷ್ಟ ಪಂಗಡಕ್ಕೆ ಅವಶ್ಯಕವಾಗಿರುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಪರಿಶಿಷ್ಟ ಜಾತಿಗೆ ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಪರಿಶಿಷ್ಟ ವರ್ಗದವರ ಹೃದಯ ಗೆದ್ದಿದ್ದಾರೆ ಎಂದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ
ಅವರು, ಭದ್ರಾ ಮೇಲ್ದಂಡೆ ಯೋಜನೆ, ರೈಲ್ವೆ ಯೋಜನೆ, ವೈದ್ಯಕೀಯ ಕಾಲೇಜು ಸೇರಿದಂತೆ ಅನೇಕ ಯೋಜನೆಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಿದ್ದಾರೆ.

ಡಾ.ಬಾಬು ಜಗಜೀವನ್‍ರಾಂ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಿದ ನಂತರ ರಾಜ್ಯ ಸರ್ಕಾರವು ರೂ.480 ಕೋಟಿ ಬಿಡುಗಡೆ ಮಾಡಿದೆ.

ಚಿತ್ರದುರ್ಗ ಜಿಲ್ಲೆಗೆ ರೂ.53 ಕೋಟಿ ನೀಡಲಾಗಿದೆ. ಎಲ್ಲ ವರ್ಗದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!