ಚಿತ್ರದುರ್ಗ(ಜೂನ್ 04): ಹೊಸಹಳ್ಳಿ ಗ್ರಾಮದ ವೇದಾವತಿ ನದಿ ಬ್ಯಾರೇಜ್ ಬಳಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಒಟ್ಟು 90 ಕೋಟಿ ವೆಚ್ಚದ ಕಾಮಗಾರಿಯಲ್ಲಿ ಮೊದಲ ಹಂತದ 40 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ಕೇಂದ್ರ ಪಂಚಾಯತ್ ರಾಜ್ ರಾಜ್ಯ ಖಾತೆ ಸಚಿವ ಕಪಿಲ್ ಮೋನೇಶ್ವರ ಪಾಟೀಲ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಹೊಳಲ್ಕೆರೆ ಶಾಸಕರು ಹಾಗೂ ಕೆ ಎಸ್ ಆರ್ ಟಿ ಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಹಿರಿಯೂರು ಶಾಸಕಿ ಪೂರ್ಣಿಮಾ ಕೆ.ಶ್ರೀನಿವಾಸ್, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶಿರಾ ಶಾಸಕ ಡಾ.ರಾಜೇಶ್ ಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.