Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಾರ್ಚ್ 19 ರಂದು ಹೊಳಲ್ಕೆರೆ ಮತ್ತು ಹೊಸದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಮಾ.18) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ. 19 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 02 ಗಂಟೆಗೆ ಹೊಳಲ್ಕೆರೆ ಬಳಿಯ ಕುಡಿನೀರುಕಟ್ಟೆ ಗ್ರಾಮದ ಹತ್ತಿರದ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಹೊಳಲ್ಕೆರೆಯಲ್ಲಿ ಸಿರಿಗೆರೆ ಗುರುಗಳ ಪದವಿ ಕಾಲೇಜು ಆಟದ ಮೈದಾನದಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಹೊಳಲ್ಕೆರೆಯಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಸಂಜೆ 04 ಗಂಟೆಗೆ ರಸ್ತೆ ಮೂಲಕ ಹೊಸದುರ್ಗಕ್ಕೆ ತೆರಳಿ ಇಲ್ಲಿನ ಪಟ್ಟಣದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮುಖ್ಯಮಂತ್ರಿಗಳು ಅದೇ ದಿನ ಸಂಜೆ 5.15 ಗಂಟೆಗೆ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...