
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಮಾ.18) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ. 19 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 02 ಗಂಟೆಗೆ ಹೊಳಲ್ಕೆರೆ ಬಳಿಯ ಕುಡಿನೀರುಕಟ್ಟೆ ಗ್ರಾಮದ ಹತ್ತಿರದ ಹೆಲಿಪ್ಯಾಡ್‍ಗೆ ಆಗಮಿಸುವರು.
ನಂತರ ಹೊಳಲ್ಕೆರೆಯಲ್ಲಿ ಸಿರಿಗೆರೆ ಗುರುಗಳ ಪದವಿ ಕಾಲೇಜು ಆಟದ ಮೈದಾನದಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಹೊಳಲ್ಕೆರೆಯಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 04 ಗಂಟೆಗೆ ರಸ್ತೆ ಮೂಲಕ ಹೊಸದುರ್ಗಕ್ಕೆ ತೆರಳಿ ಇಲ್ಲಿನ ಪಟ್ಟಣದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಅದೇ ದಿನ ಸಂಜೆ 5.15 ಗಂಟೆಗೆ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.
GIPHY App Key not set. Please check settings