Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಹಿರಿಯೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

Facebook
Twitter
Telegram
WhatsApp

 

ಚಿತ್ರದುರ್ಗ,(ನ.21): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ನವೆಂಬರ್ 22 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ನವೆಂಬರ್ 22ರಂದು ಬೆಳಿಗ್ಗೆ 10.15ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲೆಕಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 11ಕ್ಕೆ ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು.

ಬೆಳಿಗ್ಗೆ 11.15 ಕ್ಕೆ ಹಿರಿಯೂರು ತಾಲ್ಲೂಕಿನ ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವರು.

ಬೆಳಿಗ್ಗೆ 11.45ಕ್ಕೆ ವಿವಿ ಸಾಗರದಿಂದ ರಸ್ತೆಯ ಮೂಲಕ ಹೊರಟು, ಮಧ್ಯಾಹ್ನ 12ಕ್ಕೆ ಹಿರಿಯೂರಿನ ನೆಹರು ಮೈದಾನ (ಕಡಲೆಕಾಯಿ ಮಂಡಿ)ಯಲ್ಲಿ ಆಯೋಜಿಸಿರುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2ಕ್ಕೆ ಹಿರಿಯೂರು ರಸ್ತೆಯ ಮೂಲಕ ಮಧ್ಯಾಹ್ನ 2.30ಕ್ಕೆ ಚಳ್ಳಕೆರೆಗೆ ಆಗಮಿಸಿ, ಮೀರಾಸಾಬಿಹಳ್ಳಿ ರಾಣಿಕೆರೆಗೆ ಬಾಗಿನ ಅರ್ಪಣೆ ಮಾಡುವರು. ನಂತರ ಚಳ್ಳಕೆರೆಯ ಬಿ.ಎಂ.ಜಿ.ಹೆಚ್.ಎಸ್.ರಂಗಮಂದಿರದ ಆವರಣದಲ್ಲಿ ಆಯೋಜಿಸಿರುವ ಪಕ್ಷದ ಕಾರ್ಯಕ್ರಮದಲ್ಲಿ  ಭಾಗವಹಿಸುವರು.

ಸಂಜೆ 5ಕ್ಕೆ ಚಳ್ಳಕೆರೆಯಿಂದ ರಸ್ತೆ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!