Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

---Advertisement---

ಬೆಂಗಳೂರು, ನವೆಂಬರ್ 27 :ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ  ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. 

ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ,  ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ  ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ.   ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನಸ್ಪಂದನ
ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ  ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...