ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ : ಪ್ರೊ.ಸಿ.ಕೆ.ಮಹೇಶ್ ಆಕ್ರೋಶ

1 Min Read

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಆಪಾದಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಗಮೋಹನ್‍ದಾಸ್ ವರದಿಯ ಗಡುವು ಮುಗಿದಿರುವುದರಿಂದ ರಾಜ್ಯ ಸರ್ಕಾರ ಇಷ್ಟೊತ್ತಿಗಾಗಲೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕಿತ್ತು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಎಸ್ಸಿಪಿ. ಟಿಎಸ್ಸಿ. ಹಣ ದುರುಪಯೋಗವಾಗುತ್ತಿದ್ದರು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಶಾಸಕರುಗಳು ಧ್ವನಿ ಎತ್ತದೆ ಸುಮ್ಮನಿರುವುದು ನೋವಿನ ಸಂಗತಿ. ಪಕ್ಷದ ಹಿತಕ್ಕೆ ಅಂಟಿಕೊಂಡಿರುವ ಇವರುಗಳು ಜನಾಂಗವನ್ನು ನಿರ್ಲಕ್ಷಿಸುತ್ತಿದ್ದಾರೆ. ಆಸಕ್ತಿ, ಬದ್ದತೆ, ಕಾಳಜಿಯಿಲ್ಲ. ಬ್ಯಾಕ್‍ಲಾಗ್ ಸಮಿತಿಯಲ್ಲಿ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಹೆಚ್.ಕೆ.ಪಾಟೀಲ್ ಇವರುಗಳಿದ್ದರು ಪ್ರಯೋಜನವಿಲ್ಲದಂತಾಗಿದೆ ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕøತಿಕ ಸಂಘದ ಮಹಾ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡುತ್ತ ಒಳ ಮೀಸಲಾತಿ ಜಾರಿಯಾಗುವತನಕ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಬಾರದೆಂಬುದು ನಮ್ಮ ಬೇಡಿಕೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇಮಕಾತಿ ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವುದು ಯಾವ ನ್ಯಾಯ? ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ದಿಗಾಗಿಯೇ ಬಳಸಬೇಕಾಗಿರುವ ಹಣ ಬೇರೆ ಬೇರೆ ಉದ್ದೇಶಗಳಿಗೆ ಖರ್ಚು ಮಾಡಲಾಗುತ್ತಿದೆ. ಫೆ.2 ಕ್ಕೆ ನಾಗಮೋಹನ್‍ದಾಸ್ ವರದಿ ಗಡುವು ಮುಗಿದಿದ್ದರೂ ಸರ್ಕಾರ ಒಳ ಮೀಸಲಾತಿ ಜಾರಿ ಬಗ್ಗೆ ಇನ್ನು ಮೀನಾಮೇಷ ಎಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್. ಸರ್ಕಾರಗಳು ಎಸ್ಸಿಪಿ, ಟಿಎಸ್ಪಿ. ಯೋಜನೆಯಡಿ ಬಳಸಬೇಕಾಗಿದ್ದ ಎಪ್ಪತ್ತು ಸಾವಿರ ಕೋಟಿ ರೂ.ಗಳನ್ನು  ಬೇರೆ ಬೇರೆ ಇಲಾಖೆಗಳಿಗೆ ಬಳಸಿ ಎಸ್ಸಿ.ಎಸ್ಟಿ.ಗಳಿಗೆ ದ್ರೋಹವೆಸಗುತ್ತಿದೆ ಎಂದು ಹೇಳಿದರು.

ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಕುಮಾರ್, ಗೌರವಾಧ್ಯಕ್ಷ ಡಿ.ದುರುಗೇಶಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಸುಧಾಕರ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *