ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

1 Min Read

ಬೆಂಗಳೂರು,ಅ.16 :BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

Share This Article
Leave a Comment

Leave a Reply

Your email address will not be published. Required fields are marked *