Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರ ಚಂದ್ರಹಾಸ” ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬೆಂಗಳೂರು, ಏಪ್ರಿಲ್. 05 : ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಕಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು. ನಿಮ್ಮ ಇಡೀ ಕಲಾ ತಂಡಕ್ಕೆ ಮತ್ತು ಸಿನಿಮಾ ತಂಡಕ್ಕೆ ಶುಭಾಶಯಗಳು‌ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮುಖ್ಯಮಂತ್ರಿಗಳ ಆಶೀರ್ವಾದ ಪಡೆದ ರವಿ ಬಸ್ರೂರು ತಂಡ ಅವರನ್ನು ಸಿನಿಮಾ ವೀಕ್ಷಣೆಗೆ ಬರಬೇಕು ಎಂದು ಆಹ್ವಾನಿಸಿದರು. ಬರುತ್ತೇನೆ ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿಗಳು ಸಿನಿಮಾ ತಂಡಕ್ಕೆ ಮತ್ತೊಮ್ಮೆ ಶುಭ ಹಾರೈಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment