ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 30 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ಕಾರ್ಮಿಕರು ನಾಲ್ಕು ದಿನಗಳಿಂದ ನಡೆಸುತ್ತಿರುವ ಮುಷ್ಕರ ನ್ಯಾಯಯುತವಾಗಿದೆ. ವಿಧಾನಸಭೆಯಲ್ಲಿ ಚರ್ಚಿಸುವಂತೆ ಬಿಜೆಪಿ ನಾಯಕರುಗಳಲ್ಲಿ ಮನವಿ ಮಾಡುವುದಾಗಿ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಧರಣಿನಿರತರಿಗೆ ಭರವಸೆ ನೀಡಿದರು.
ನಗರಸಭೆ ಮುಂಭಾಗ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಜಿ.ಹೆಚ್.ತಿಪ್ಪಾರೆಡ್ಡಿ ಪೌರ ಕಾರ್ಮಿಕರು, ವಾಲ್‍ಮನ್‍ಗಳು, ನೀರು ಸರಬರಾಜುದಾರರು, ಚಾಲಕರು, ಪೌರ ನೌಕರರು ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಯಾರೇ ಆಗಿರಬಹುದು. ರಾಜಕೀಯ ಮಾಡಬಾರದು. ರೋಗ ರುಜಿನಗಳಿಗೆ ಸುಲಭವಾಗಿ ತುತ್ತಾಗುವಂತ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು. ದಲಿತರು, ಬಡವರ ಪರ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೌರ ಕಾರ್ಮಿಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ವಿನಂತಿಸಿದರು.
ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಪೌರ ಕಾರ್ಮಿಕರು ಕೆಲಸ ಮಾಡಿದ್ದಾರೆ. ಬಿ.ಬಿ.ಎಂ.ಪಿ.ಯಲ್ಲಿನ ಪೌರ ಕಾರ್ಮಿಕರ ಸೇವೆಯನ್ನು ಹೇಗೆ ಖಾಯಂಗೊಳಿಸಲಾಗಿದೆಯೋ ಅದೆ ರೀತಿ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರ ಸೇವೆ ಖಾಯಂಗೊಳಿಸಿ ಜೀವನಕ್ಕೆ ಭದ್ರತೆ ಒದಗಿಸಲಿ ಎಂದು ಜಿ.ಹೆಚ್.ತಿಪ್ಪಾರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಇ.ಎಸ್.ಐ. ಪಿ.ಎಫ್. ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳು ಪೌರ ಕಾರ್ಮಿಕರಿಗೆ ಸಿಗಬೇಕು. ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡುವುದನ್ನು ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಂಡು ಸರ್ಕಾರದಿಂದಲೆ ವೇತನ ಪಾವತಿಸಬೇಕೆಂದರು. ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಹರೀಶ್, ದೀಪು, ನಾಮ ನಿರ್ದೇಶಕ ಸದಸ್ಯ ಕೃಷ್ಣ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











