Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಮುಚ್ಚಿಡಬಾರದು : ನಾಗರಾಜು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.27 : : ವಾಸಿಸಲು ಸ್ವಂತ ಮನೆಗಳಿಲ್ಲದೆ ಅಲೆಮಾರಿ, ಅರೆಅಲೆಮಾರಿ ಜನಾಂಗ ಟೆಂಟ್‍ಗಳಲ್ಲಿ ಜೀವನ ಸಾಗಿಸುತ್ತಿದ್ದು, ಭೂ ಒಡೆತನ ಸ್ಕೀಂ ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರ ವಸತಿ ಸೌಲಭ್ಯ ಒದಗಿಸಬೇಕೆಂದು ಅಲೆಮಾರಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜು ಕೆ.ಎಂ. ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2016-17 ರಲ್ಲಿ ಅಲೆಮಾರಿ ಕೋಶವನ್ನು ರಚಿಸಿದ ರಾಜ್ಯ ಸರ್ಕಾರ 102 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿಟ್ಟಿತ್ತು. 72 ಜಾತಿಗಳು ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಸೇರ್ಪಡೆಯಾದ ನಂತರ ಕೊರಚ, ಕೊರಮ ಜನಾಂಗವನ್ನು ಅಲೆಮಾರಿ ಅರೆಅಲೆಮಾರಿ ಜನಾಂಗಕ್ಕೆ ಸೇರಿಸಿತೆ ವಿನಃ ಜನಸಂಖ್ಯೆಗನುಗುಣವಾಗಿ ಅನುದಾನ ಹೆಚ್ಚಿಸಲಿಲ್ಲ. ರಾಜ್ಯದಲ್ಲಿ ಎರಡರಿಂದ ನಾಲ್ಕು ಲಕ್ಷದಷ್ಟು ಅಲೆಮಾರಿಗಳಿದ್ದು, ಸಂಕಷ್ಟದಲ್ಲಿ ಜೀವಿಸುತ್ತಿದ್ದಾರೆ. ನಿರ್ಧಿಷ್ಟವಾದ ಸ್ಥಳವಿಲ್ಲ. ರಾಜ್ಯ ಸರ್ಕಾರ ಅಲೆಮಾರಿ, ಅರೆಅಲೆಮಾರಿಗಳ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
ಕೊರಚ ಜನಾಂಗದ ಜಿಲ್ಲಾಧ್ಯಕ್ಷ ವೈ.ಕುಮಾರ್ ಮಾತನಾಡಿ 2011 ರ ಜಾತಿಗಣತಿಯನ್ನು ಮಾನದಂಡವಾಗಿಟ್ಟುಕೊಂಡು ರಾಜ್ಯ ಸರ್ಕಾರ ಅಲೆಮಾರಿ ಮತ್ತು ಅರೆಅಲೆಮಾರಿಗಳನ್ನು ವಂಚಿಸುತ್ತ ಬರುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಮುಚ್ಚಿಡಬಾರದು. ಬಹಿರಂಗಪಡಿಸಬೇಕು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಜನಾಂಗಕ್ಕೆ ಸರ್ಕಾರ ವಸತಿ ಸೌಲಭ್ಯ ನೀಡಲಿ ಎಂದು ಆಗ್ರಹಿಸಿದರು.

ಅಲಕ್ಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ತಿಪ್ಪೇಸ್ವಾಮಿ ಸಂಪಿಗೆ ಮಾತನಾಡುತ್ತ ಅಲೆಮಾರಿ ಮತ್ತು ಅರೆಅಲೆಮಾರಿಗಳಿಗೆ ಶಾಶ್ವತ ನೆಲೆ ಬೇಕಾಗಿದೆ. ಎಲ್ಲಿ ಐವತ್ತು ಕುಟುಂಬಗಳು ವಾಸಿಸುತ್ತಿವೆಯೋ ಅಂತಹ ಪ್ರದೇಶವನ್ನು ಗುರುತಿಸಿ ಪ್ರತ್ಯೇಕ ಕಾಲೋನಿಯನ್ನಾಗಿಸಬೇಕು. ಮೂಲಭೂತ ಸೌಲಭ್ಯಗಳು ಸರ್ಕಾರದಿಂದ ಸಿಕ್ಕಾಗ ಮಾತ್ರ ಈ ಜನಾಂಗ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.

ಸುಡುಗಾಡು ಸಿದ್ದ ಜನಾಂಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಮಾತನಾಡಿ ವಸತಿಗಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜನಾಂಗದಲ್ಲಿನ ಸಮಸ್ಯೆಗಳನ್ನು ಕೇಳಲು ಯಾರು ಶಾಸಕರಾಗಲಿ, ಸಂಸದರಾಗಲಿ ಇಲ್ಲ. ಶೋಷಿತ ವರ್ಗಕ್ಕೆ ಸೇರಿದ ನಮ್ಮನ್ನು ಹೇಳುವವರು ಕೇಳುವವರೆ ಇಲ್ಲದಂತಾಗಿದ್ದಾರೆ. ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಶ್ವತ ನೆಲೆ ಒದಗಿಸಲಿ ಎಂದು ವಿನಂತಿಸಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡುತ್ತ ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ ಜಿಲ್ಲೆಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮೂಲಭೂತ ಸೌಲಭ್ಯಗಳಿಂದ ಮೊದಲಿನಿಂದಲೂ ವಂಚಿತವಾಗಿದೆ. ಭೂಮಿ, ವಸತಿ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ರಾಜಕೀಯದಲ್ಲಿ ಅಧಿಕಾರ ಯಾವುದು ಸಿಕ್ಕಿಲ್ಲ. ಸರ್ಕಾರ ಅಲೆಮಾರಿ ಅರೆಅಲೆಮಾರಿಗಳ ಬೇಡಿಕೆಗಳನ್ನು ಕೂಡಲೆ ಈಡೇರಿಸಬೇಕೆಂದು ಮನವಿ ಮಾಡಿದರು.

ಸಿಳ್ಳಕ್ಯಾತ ಮುಖಂಡ ಮಾರಿಕಾಂಬ ಕೃಷ್ಣಪ್ಪ, ಚನ್ನದಾಸ ಜನಾಂಗದ ಅಧ್ಯಕ್ಷ ರಂಗಪ್ಪ, ಜಯಣ್ಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!