ತಾ ಕಳ್ಳ ಇತರರ ನಂಬ : ಯತೀಂದ್ರ ವಿಚಾರಕ್ಕೆ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

1 Min Read

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಪುತ್ರ ಯತೀದ್ರ ಅವರ ವಿಡಿಯೋ ಹಾಕಿ ವ್ಯಂಗ್ಯವಾಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ @hd_kumaraswamy ಅವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ.

ಪೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ.

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *