ಚಿತ್ರದುರ್ಗ. ಮೇ10: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 11ರಂದು) ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಂಗಣದ ಹೆಲಿಪ್ಯಾಡ್-1ಕ್ಕೆ ಆಗಮಿಸಿ, ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ದಿವಂಗತ ಡಿ.ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಕೆ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ಚಳ್ಳಕೆರೆ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.
==========
ಪಶುಸಂಗೋಪನೆ ಸಚಿವರ ಜಿಲ್ಲಾ ಪ್ರವಾಸ :

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು ಮೇ 11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 6ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಆಗಮಿಸಿ, ಚಳ್ಳಕೆರೆ ನಗರದ ಸುಧಾಕರ್ ಸ್ಟೇಡಿಯಂನಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ದಿವಂಗತ ಡಿ.ಸುಧಾಕರ್ ಅವರ ಅಂತಿಮ ದರ್ಶನ ಪಡೆಯುವರು. ಬೆಳಿಗ್ಗೆ 10ಕ್ಕೆ ಚಳ್ಳಕೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ಪಿ.ವೆಂಕಟೇಶ್ ತಿಳಿಸಿದ್ದಾರೆ.









