ನಾಳೆ ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

0 Min Read

ದಾವಣಗೆರೆ,ಫೆಬ್ರವರಿ.02 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 3 ರಂದು ಬೆಳಗ್ಗೆ 12.50 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಎಂ.ಬಿ.ಎ ಮೈದಾನಕ್ಕೆ ಆಗಮಿಸುವರು.

ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿ ತಾ; ಹೆಚ್.ಕಡದಕಟ್ಟೆ ಗ್ರಾಮದ ಹೆಲಿಪ್ಯಾಡ್‍ಗೆ ಆಗಮಿಸಿ ಹೊನ್ನಾಳಿಯಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಆಯೋಜಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ, ದಾಸಶ್ರೇಷ್ಟ ಶ್ರೀ ಭಕ್ತ ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂ.4.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Share This Article
Leave a Comment

Leave a Reply

Your email address will not be published. Required fields are marked *