ದಾವಣಗೆರೆ,ಫೆಬ್ರವರಿ.02 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 3 ರಂದು ಬೆಳಗ್ಗೆ 12.50 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಎಂ.ಬಿ.ಎ ಮೈದಾನಕ್ಕೆ ಆಗಮಿಸುವರು.
ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿ ತಾ; ಹೆಚ್.ಕಡದಕಟ್ಟೆ ಗ್ರಾಮದ ಹೆಲಿಪ್ಯಾಡ್‍ಗೆ ಆಗಮಿಸಿ ಹೊನ್ನಾಳಿಯಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಆಯೋಜಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ, ದಾಸಶ್ರೇಷ್ಟ ಶ್ರೀ ಭಕ್ತ ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂ.4.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















