ಚಿತ್ರದುರ್ಗ. ಜುಲೈ19: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ರಸ್ತೆಯ ಮೂಲಕ ಮಧ್ಯಾಹ್ನ 2ಕ್ಕೆ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಆಗಮಿಸಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಹೆಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು.
ನಂತರ ರಾತ್ರಿ 7ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












