Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಚಿತ್ರದುರ್ಗ ಜ. 27  :  ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ನಗರದ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲಾ ಆವರಣ ಪಕ್ಕದ ಹೆಲಿಪ್ಯಾಡ್‍ಗೆ ಆಗಮಿಸುವರು.  ಬಳಿಕ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು.

ನಂತರ ಬಳಿಕ ನಗರದ ಹೊರವಲಯದಲ್ಲಿರುವ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು.

ಮಧ್ಯಾಹ್ನ ಮಾಜಿ ಸಚಿವ ಹೆಚ್. ಆಂಜನೇಯ ಅವರ ನಿವಾಸಕ್ಕೆ ಭೇಟಿ ನೀಡುವರು.  ಬಳಿಕ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡುವರು.  ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 03 ಗಂಟೆಗೆ ನಗರದ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲಾ ಆವರಣ ಪಕ್ಕದ ಹೆಲಿಪ್ಯಾಡ್‍ಗೆ ಆಗಮಿಸಿ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...