ಚಿತ್ರದುರ್ಗ, ಜುಲೈ. 25 : ಮುಂಗಾರು ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ತಲೆದೂರಿರುವ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಹಿರಿಯೂರು ತಾಲೂಕು ವ್ಯಾಪ್ತಿಯ ಯರಬಳ್ಳಿ, ತಾಳವಟ್ಟಿ ವದ್ದಿಕೆರೆ ಗ್ರಾಮಗಳಲ್ಲಿನ ರೈತರ ಜಮೀನುಗಳಿಗೆ ಖುದ್ದಾಗಿ ತೆರಳಿ, ಬರ ಪರಿಸ್ಥಿತಿಯಿಂದ ಒಣಗಿರುವ ಬೆಳೆ ಹಾಗೂ ರೈತರ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಈಶ್ವರಖಂಡ್ರೆ, ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










