Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 04 ರಂದು ಮುಖ್ಯಮಂತ್ರಿ ಆಗಮನ : ಜಿಲ್ಲಾಧಿಕಾರಿಗಳಿಂದ ಸಿದ್ಧತೆ ವೀಕ್ಷಣೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಮಾ.03): ಚಿತ್ರದುರ್ಗದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳಡಿ ಸೌಲಭ್ಯ, ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳ ಸಮ್ಮೇಳನವನ್ನು ಮಾ. 04 ರಂದು ಬೆ. 11 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮ ಉದ್ಘಾಟಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದರೂ ಆದ ಎ. ನಾರಾಯಣಸ್ವಾಮಿ, ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಹಲವು ಸಚಿವರುಗಳು, ಶಾಸಕರುಗಳು, ನಿಗಮ, ಮಂಡಳಿಗಳ ಅಧ್ಯಕ್ಷರು, ಶಾಸಕರುಗಳು, ಗಣ್ಯಾತಿಗಣ್ಯರು ಆಗಮಿಸಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 75 ಲಕ್ಷ ಜನರು ಸರ್ಕಾರದ ಒಂದಿಲ್ಲೊಂದು ಯೋಜನೆಗಳಡಿ ಸೌಲಭ್ಯ ಪಡೆದು ಫಲಾನುಭವಿಗಳಾಗಿದ್ದಾರೆ.   ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ 12 ಲಕ್ಷ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ.

ನಗರಾಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕೊಳಚೆ ನಿರ್ಮೂಲನಾ ಮಂಡಳಿ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳು ಸೇರಿದಂತೆ ಹಲವಾರು ಇಲಾಖೆಗಳ ಮೂಲಕ ನಾನಾ ಸೌಲಭ್ಯಗಳನ್ನು ಪಡೆದಿದ್ದು, ಸರ್ಕಾರಿ ಸೌಲಭ್ಯಗಳ ಫಲಾನುಭವಿಗಳಾಗಿದ್ದಾರೆ.

ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಮುಖ್ಯಮಂತ್ರಿ ರೈತ ವಿದ್ಯಾನಿಧಿ, ರೈತ ಶಕ್ತಿ, ಯಶಸ್ವಿನಿ, ಗಂಗಾಕಲ್ಯಾಣ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಕಿಸಾನ್ ಸಮ್ಮಾನ್, ಜಲಜೀವನ್ ಮಿಷನ್, ಮನೆ ಮನೆಗೆ ಗಂಗೆ, ನಮ್ಮ ಕ್ಲಿನಿಕ್, ಗ್ರಾಮ ಒನ್, ಬಡವರಿಗೆ ಹಲವು ವಸತಿ ಯೋಜನೆಗಳಡಿ ಮನೆಗಳು, ಕೊಳಚೆ ನಿರ್ಮೂಲನೆಯಡಿ ಬಡವರಿಗೆ ಮನೆಗಳು, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆ, ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳ ವಿತರಣೆ, ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣೆ, ಸೂರಿಲ್ಲದವರಿಗೆ ಹಕ್ಕುಪತ್ರಗಳ ವಿತರಣೆ ಹೀಗೆ ಹಲವಾರು ಯೋಜನೆಗಳಡಿ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ನೀಡುವ ಮೂಲಕ ಸರ್ಕಾರ ಬಡವರ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ.

ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ, ಸಮಾವೇಶದಲ್ಲಿ ಒಗ್ಗೂಡಿಸುವುದು, ಇದರ ಜೊತೆಗೆ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು,  ಹಾಗೂ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳನ್ನು ಇನ್ನಷ್ಟು, ಮತ್ತಷ್ಟು ಜನರಿಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕವಾಗಿ ತಲುಪಿಸುವ ಕಾರ್ಯಕ್ಕೆ ಮುನ್ನುಡಿ ಬರೆಯುವುದು ಈ ಸಮ್ಮೇಳನದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಮಾ. 04 ರಂದು ಚಿತ್ರದುರ್ಗ ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮ್ಮೇಳನವನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗಿದೆ.  ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಸಿದ್ಧತೆ ವೀಕ್ಷಣೆ : ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮ್ಮೇಳನಕ್ಕಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ತಯಾರಾಗುತ್ತಿದ್ದು, ಸಿದ್ಧತೆಗಳು ಬಹುತೇಕ ಅಂತಿಮ ಹಂತದಲ್ಲಿದೆ.  ವೇದಿಕೆ ನಿರ್ಮಾಣಗೊಳ್ಳುವ ಇದೇ ಮೈದಾನದ ಆವರಣದಲ್ಲಿಯೇ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆಗಾಗಿ ಪೆಂಡಾಲ್ ಸಿದ್ಧಗೊಂಡಿದ್ದು, ಸುಮಾರು 40 ಕ್ಕೂ ಹೆಚ್ಚು ಊಟದ ವಿತರಣೆ ಕೌಂಟರ್‍ಗಳು ಸಿದ್ಧಗೊಳ್ಳುತ್ತಿದೆ.

ಜಿಲ್ಲಾಧಿಕಾರಿಗಳು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ವೇದಿಕೆ ನಿರ್ಮಾಣ, ಊಟದ ಕೌಂಟರ್‍ಗಳ ನಿರ್ಮಾಣ, ಆಸನಗಳ ವ್ಯವಸ್ಥೆ ಕುರಿತಂತೆ ನಡೆಸಲಾಗುತ್ತಿದ್ದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿ, ಅಲ್ಲಿನ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ರೀತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ವ್ಯವಸ್ಥಿತವಾಗಿ ವೇದಿಕೆ, ವಿಐಪಿ, ಮಾಧ್ಯಮ ಗ್ಯಾಲರಿಗಳನ್ನು ಸಿದ್ಧಪಡಿಸಬೇಕು, ಸಾಕಷ್ಟು ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!