ಚಿತ್ರದುರ್ಗ ಜಿಲ್ಲೆಯ ಇಬ್ಬರು ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಪ್ರಕಟ

1 Min Read

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 14 : 2023ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ರಾಜ್ಯ ಸರ್ಕಾರ (State Government) ಪ್ರಕಟಿಸಿದೆ. ಚಿತ್ರದುರ್ಗ ಜಿಲ್ಲೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ರಾಜ್ಯದ ಒಟ್ಟು 126 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರಕಟವಾಗಿದೆ.

ಚಿತ್ರದುರ್ಗ ಜಿಲ್ಲೆಯ ಡಿಎಆರ್ ಡಿವೈ ಎಸ್‌ಪಿ. ಗಣೇಶ್ ಎಸ್.ಎಸ್. ಮತ್ತು ಐಮಂಗಲ ಪೊಲೀಸ್ ತರಬೇತಿ ಶಾಲೆಯ ಎಆರ್ ಎಸ್ಐ ಜಿ.ಎಸ್. ಶ್ರೀಧರ್ ಅವರು ರಾಜ್ಯ ಸರ್ಕಾರ ನೀಡುವ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ನಾಳೆ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಈ
ಪದಕ (Medal) ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರು ಪೊಲೀಸ್ ಇಲಾಖೆ ಮಹಾ ನಿರ್ದೇಶಕ ಹಾಗೂ ಮಹಾ ನಿರೀಕ್ಷಕರಿಗೆ ಪತ್ರ ಬರೆದು ಪ್ರಕಟಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ(Police department) ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್​ಪಿ, ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗೆ ಈ ಪದಕ ನೀಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *