ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜುಲೈ.26: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿ.ಡಿ.ಓ ಎನ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ನನ್ನಿವಾಳ ಗ್ರಾ.ಪಂ. ಪಿಡಿಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಎನ್.ಪಾಲಯ್ಯ ಅವರು ಗ್ರಾ.ಪಂ. ಸಿಬ್ಬಂದಿ ವೇತನ, 14 ಮತ್ತು 15ನೇ ಹಣಕಾಸು ಯೋಜನೆ ಅನುದಾನ, ಲೇ ಔಟ್‌ಗಳ ತೆರಿಗೆ ಹಾಗೂ ಶುಲ್ಕ ಸಂಗ್ರಹದ ವ್ಯವಹಾರದಲ್ಲಿ ಹಣಕಾಸಿನ ದುರಪಯೋಗ ತೋರಿದ್ದಾರೆ, ಇದರ ಜೊತೆಗೆ ಕಿವುಡ ಹಾಗೂ ಮೂಗರ ನಿವೇಶನಗಳ ಹಂಚಿಕೆ, ವೈಯಕ್ತಿಕ ಲಾಭಕ್ಕಾಗಿ ಆಯಿಲ್ ಮಿಲ್, ಜಲ್ಲಿ ಕ್ರಷರ್‌ಗಳಿಗೆ ಕಡಿಮೆ ತೆರಿಗೆ ವಿಧಿಸಿ ಗ್ರಾ.ಪಂ.ಗೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪಕ್ಕೆ ಗುರಿಯಾಗಿದ್ದರು. ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್‌ಗೂ ಸರಿಯಾದ ಉತ್ತರ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನಲೆಯಲ್ಲಿ ಚಳ್ಳಕೆರೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಿಂದ ವರದಿ ಪಡೆದು, ನಿಯಮಾನುಸಾರ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಓ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್