Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿಕ್ಕಗೊಂಡನಹಳ್ಳಿಯಲ್ಕಿ ಶಾಲಾ ದಾಖಲಾತಿ ಆಂದೋಲನ : ಶಿಕ್ಷಕರ ಕಾಳಜಿ ಶ್ಲಾಘನೀಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 22 : ಶಾಲಾ ದಾಖಲಾತಿ ಆಂದೋಲನವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಸಹಕಾರಿಯಾಗಲಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ತಿಳಿಸಿದರು.
ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ದಾಖಲಾತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.

 

ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಒಂದನೆ ತರಗತಿ ಹಾಗೂ ಇತರೆ ತರಗತಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಗರಿಷ್ಠಗೊಳಿಸಿ ಅದರಂತೆ ಮನೆ ಮನೆಗೆ ಭೇಟಿ ಮಾಡಿ ಎಲ್.ಕೆ.ಜಿ. ವಿಭಾಗಕ್ಕೆ 25 ಮಕ್ಕಳು ಹಾಗೂ ಒಂದನೆ ತರಗತಿಗೆ 24 ಮಕ್ಕಳು ದಾಖಲಾಗುವಂತೆ ಶಿಕ್ಷಕರು ಕಾಳಜಿ ವಹಿಸಿರುವುದು ವಿಶೇಷ ಎಂದು ಶ್ಲಾಘಿಸಿದರು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ದಿನೇಶ್ ಮಾತನಾಡಿ ಶಿಕ್ಷಕರುಗಳು ಮನೆ ಮನೆಗೆ ಭೇಟಿ ನೀಡಿ ಪೋಷಕರುಗಳಲ್ಲಿ ಜಾಗೃತಿ ಮೂಡಿಸುವುದು ಮತ್ತು ಶಾಲಾ ವಯಸ್ಸಿನ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಿ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡುವುದು ಆಂದೋಲನದ ಪ್ರಮುಖ ಉದ್ದೇಶವಾಗಬೇಕು. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉಚಿತ ಪಠ್ಯ ಪುಸ್ತಕಗಳು, ಕ್ಷೀರಭಾಗ್ಯ ಯೋಜನೆಯಡಿ ಹಾಲು, ಶೂ, ಸಾಕ್ಸ್ ವಿತರಣೆ. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ವಸತಿ ನಿಲಯಗಳ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವುದೇ ಶಾಲಾ ದಾಖಲಾತಿ ಆಂದೋಲನದ ಗುರಿ ಎಂದು ಹೇಳಿದರು.

 

ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರುಗಳಾದ ಕುಸುಮ ಕೆ, ರೇವಣ್ಣ, ರೀಟಾಮಣಿ, ಸಿದ್ದಮ್ಮ, ವೀಣಾ, ತ್ರಿವೇಣಿ, ಅರುಣ್‍ಕುಮಾರ್, ಅಣ್ಣಪ್ಪಸ್ವಾಮಿ, ಬಸವರಾಜ್, ರತ್ನಮ್ಮ ಪೋಷಕರು ಹಾಗೂ ಮಕ್ಕಳು ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now