ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಖಾಸಗಿ ಬಸ್ ಹರಿದು, ಒಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಬಸ್ ನಿಲ್ದಾಣದಲ್ಲಿ ನಡೆದಿದೆ. 15 ವರ್ಷದ ತುಳಸಿ ನಿಧನರಾಗಿದ್ದಾರೆ.
ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇನ್ನಿಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇನ್ನು ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಏಕಾಏಕಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮನೆಯ ಛಾವಣಿ ಕೂಡ ಜಕಂ ಆಗಿದೆ. ಮೃತ ವಿದ್ಯಾರ್ಥಿನಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











