ಬೆಂಗಳೂರು: 18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಸೇರಿದಂತೆ ಕೋವಿಡ್ ಸಂಭವನೀಯ ಮೂರನೇ ಅಲೆಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಆರೋಗ್ಯ ಸೌಧದಲ್ಲಿ ವೀಡಿಯೋ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲಾಮಟ್ಟದಲ್ಲಿ ತೃತೀಯ ಹಂತದ ಆರೋಗ್ಯ ಸೇವೆ ನೀಡಲು 21 ವೈದ್ಯಕೀಯ ಕಾಲೇಜುಗಳಿದ್ದು, ಸಂಭವನೀಯ ಮೂರನೇ ಅಲೆ ಅಥವಾ ಹೊಸ ಓಮಿಕ್ರಾನ್ ವೈರಾಣು ಸಂಬಂಧಿತ ಚಿಕಿತ್ಸೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. ವೈದ್ಯಕೀಯ ಕಾಲೇಜುಗಳ ಎಚ್‍ಒಡಿ, ಪ್ರೊಫೆಸರ್, ಹಿರಿಯ ವೈದ್ಯರು ಸೇರಿದಂತೆ ಪ್ರತಿಯೊಬ್ಬರೂ ಸಮಯೋಚಿತವಾಗಿ ವರ್ತಿಸಬೇಕು. ಗೃಹ ವೈದ್ಯರು, ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿಗಳು ಸೇರಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಒಂದನೇ ಮತ್ತು ಎರಡನೇ ಅಲೆಯಲ್ಲಿ ಐಸಿಯುನಲ್ಲಿದ್ದ ಸೋಂಕಿತರಿಗೆ ಚಿಕಿತ್ಸೆ ನೀಡಲು ದಾದಿಯರ ಕೊರತೆಯಾಗಿತ್ತು. ಈಗ ಆ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗಿದೆ. ಅಂತಿಮ ವರ್ಷದ ನರ್ಸಿಂಗ್, ಪ್ಯಾರಾ ಮೆಡಿಕಲ್ ನಲ್ಲಿ ಸುಮಾರು 18 ಸಾವಿರ ಮಂದಿ ಇದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಅವರಿಗೆ ಒಂದು ತಿಂಗಳ ತರಬೇತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
*ಮಕ್ಕಳ ಐಸಿಯು ಸಿದ್ಧ*
ಸಚಿವ ಸಂಪುಟ ನಿರ್ಧಾರದಂತೆ ಮಕ್ಕಳ ಐಸಿಯುಗಳ ಸಿದ್ಧತೆಗೆ ಸೂಚಿಸಲಾಗಿದೆ. ಅಗತ್ಯ ಉಪಕರಣಗಳ ಖರೀದಿ ಹಾಗೂ ಇತರ ಎಲ್ಲಾ ವ್ಯವಸ್ಥೆಗಳ ಬಗ್ಗೆ ಸಂಪೂರ್ಣ ವಿವರ ಪಡೆಯಲಾಗಿದೆ. ಸಂಸ್ಥೆಗಳು ಮುಂದಿಟ್ಟ ಸಮಸ್ಯೆಗಳಿಗೂ ಪರಿಹಾರ ಸೂಚಿಸಲಾಗಿದೆ. ಗೃಹ ವೈದ್ಯರ ಕೋವಿಡ್ ರಿಸ್ಕ್ ಭತ್ಯೆ ಬಾಕಿ ಇದ್ದು, ಹಣಕಾಸು ಇಲಾಖೆಯಿಂದ 55 ಕೋಟಿ ರೂ. ಬಿಡುಗಡೆ ಮಾಡಿಸಲಾಗಿದೆ. ಒಟ್ಟಾರೆಯಾಗಿ ಬೇಕಾಗಿದ್ದ 73 ಕೋಟಿ ರೂ. ಅನ್ನು ಒಂದೆರಡು ದಿನಗಳಲ್ಲಿ ಖಾತೆಗೆ ಜಮೆಯಾಗುವಂತೆ ಕ್ರಮ ವಹಿಸಲಾಗಿದೆ. ಪ್ರತಿ ತಿಂಗಳು ವೇತನ ಖಾತೆಗೆ ಜಮೆಯಾಗಲು ತಾಂತ್ರಿಕ ಸಮಸ್ಯೆಗಳಿದ್ದವು. ಎಚ್‍ಆರ್ ಎಂಎಸ್ ನಲ್ಲಿ ನೋಂದಣಿಗೆ ಸಂಸ್ಥೆಗಳು 20 ದಿನಗಳ ಕಾಲ ತೆಗೆದುಕೊಂಡಿವೆ. ಡಿಸೆಂಬರ್ ನಿಂದ ವೇತನ ನೇರವಾಗಿ ಖಾತೆಗೆ ಜಮೆಯಾಗಲಿದೆ ಎಂದು ವಿವರಿಸಿದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…