Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಅಪರಾಧ; ಪೋಷಕರಿಗೂ ಶಿಕ್ಷೆ: ಅಣ್ಣಪ್ಪಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದರೆ ಪೋಕ್ಸೊ ಕಾಯಿದೆಯಡಿ ಶಿಕ್ಷೆಗೆ ಒಳಪಡಿಸಲಾಗುವುದೆಂದು ನ್ಯಾಯವಾದಿ ಹೆಚ್.ಅಣ್ಣಪ್ಪಸ್ವಾಮಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ತಳಮಟ್ಟದಲ್ಲಿ ನ್ಯಾಯದ ಅರಿವು ಪಾರದರ್ಶಕತೆ ಕುರಿತು ಮಾಹಿತಿ ಮತ್ತು ಉಪ ಕ್ರಮ ಅಂಗವಾಗಿ ಅಳಗವಾಡಿ ಗ್ರಾಮ ಪಂಚಾಯಿತಿಯಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಪ್ರಾಪ್ತ ಮಕ್ಕಳಿಗೆ ವಿವಾಹ ಮಾಡಿದರೆ ಪೋಷಕರಿಗೂ ಜೈಲು ಶಿಕ್ಷೆಯಾಗುತ್ತದೆ. ಅದೇ ರೀತಿ ಬಡತನವನ್ನು ಕಾರಣವಾಗಿಟ್ಟುಕೊಂಡು ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಗೆ ದೂಡುವುದು ಅಪರಾಧ. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಜಾಸ್ತಿಯಾಗುತ್ತಿರುವುದರ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕೆ.ಸಿ.ಸುನಿತ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಷಣ್ಮುಖಪ್ಪ, ಶಿಕ್ಷಕರುಗಳಾದ ಸದಾನಂದ, ಮಧುರ, ಲತ, ಎಸ್.ಶಿವಮೂರ್ತಿ, ಮಲ್ಲಿಕಾರ್ಜುನಸ್ವಾಮಿ, ಗ್ರಾಮಸ್ಥರಾದ ನಿಜಲಿಂಗಪ್ಪ, ಚಂದ್ರಪ್ಪ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now