Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಕ್ಕಳು ಮತ್ತು ಶಿಕ್ಷಕರು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು : ಹೆಚ್‌.ಎಸ್‌.ಟಿ. ಸ್ವಾಮಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 01 : ವಿದ್ಯಾರ್ಥಿಗಳು ನಮ್ಮ ಸುತ್ತ ಮುತ್ತ ಇರುವ ಪ್ರಕೃತಿಯನ್ನು ಕುತೂಹಲದಿಂದ ನೋಡಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಮನಸ್ಸು ವಿಕಾಸವವಾಗಲು ಸಾಧ್ಯ ಎಂದು ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿಗಳಾದ ಹೆಚ್‌ಎಸ್‌ಟಿ ಸ್ವಾಮಿ ಹೇಳಿದರು.

ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಶ್ರೀ ಭೀಮೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳು ಪಠ್ಯದಿಂದಲೆ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಇದು ಸ್ಪರ್ಧಾತ್ಮಕ ಯುಗ, ವಿದ್ಯಾರ್ಥಿಗಳು ಎಲ್ಲಾ ರೀತಿಯ ಜ್ಞಾನ ಹೊಂದಲು ಶಿಕ್ಷಕರು ಮಕ್ಕಳ ಮೇಲೆ ಪ್ರಭಾವ ಬೀರಬೇಕು. ಈ ರೀತಿ ಉತ್ತಮ ಪ್ರಭಾವ ಬೀರಿದಾಗ ಮಾತ್ರ ಅವರು ಭವಿಷ್ಯದಲ್ಲಿ ಬೆಳೆಯಲು ಸಾಧ್ಯ. ಇಂದಿನ ವಿಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಪ್ರಶ್ನಿಸದೇ ಯಾವುದನ್ನೂ ಒಪ್ಪಿಕೊಳ್ಳಬಾರದು. ಮಕ್ಕಳು ಮತ್ತು ಶಿಕ್ಷಕರು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಗುರುಗಳಿಗೆ ತಂದೆ ತಾಯಿಗಳಿಗೆ ಶಾಲೆಗೆ ಕೀರ್ತಿ ತನ್ನಿಎಂದು ಹಾರೈಸಿದರು.

ಶಾಲೆಯ ಸಲಹಾ ಸಮಿತಿ ಸದಸ್ಯರಾದ ಬಿ.ಕೆ.ಕಲ್ಲಪ್ಪ ಮಾತನಾಡಿ, ಶಾಲೆಯ ಅಭಿವೃದ್ಧಿಗಾಗಿ ಸಲಹಾ ಸಮಿತಿ ಹಾಗೂ ಆಡಳಿತ ಮಂಡಳಿ ತುಂಬಾ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿಯಾದ ಎಲ್ ಕೆ ಸುಮಾ ಮಾತನಾಡಿ ಶಾಲಾ ಸ್ಥಳೀಯ ಸಲಹಾ ಸಮಿತಿಯ ನಮ್ಮ ಶಾಲೆಯ ವಿದ್ಯಾರ್ಥಿಗಳು ಕ್ರೀಡೆ, ವಿಜ್ಞಾನ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿ. ನಮ್ಮ ಎಲ್ಲಾ ಸಲಹಾ ಸಮಿತಿ ಸದಸ್ಯರುಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ
ನಂದಿನಿ ಜೆ, ಹೇಮಾವತಿ ಎಸ್, ಲಾವಣ್ಯ ಎಂ, ರೇಣುಕಾ ಆರ್ ಎನ್, ತೇಜಸ್ವಿನಿ ರಂಜಿತಾ, ದಿವ್ಯ ಹೆಚ್ ಅವರಿಗೆ ನಗದು ಬಹುಮಾನ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಸ್ಥಳೀಯ ಸಲಹಾಸಮಿತಿ ಅಧ್ಯಕ್ಷರು ಬಿ.ಟಿ‌ ಪುಟ್ಟಪ್ಪ ಉಪಾಧ್ಯಕ್ಷ ಎ ಎಂ ಧನ್ಯ ಕುಮಾರ್, ಸಲಹಾ ಸಮಿತಿ ಸದಸ್ಯರುಗಳಾದ ಬಿ ಕೆ ಕಲ್ಲಪ್ಪ ಟಿ ಮಹೇಶ್ವರಪ್ಪ ಎನ್, ದೇವ್ ಕುಮಾರ್, ಕೆಂಚ ವೀರಪ್ಪ, ಶಿಕ್ಷಕರುಗಳಾದ ಕೋಮಲದೇವಿ, ಜಿಎಂ ಮಮತಾ, ಪ್ರದೀಪ್ ಹಾಗೂ ಮಕ್ಕಳು ಪೋಷಕರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now