Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಿಗೆ ಕಿರಿಯ ವಯಸ್ಸಿನಲ್ಲಿಯೇ ಕೌಶಲ್ಯ ತರಬೇತಿ ಅಗತ್ಯ : ಅಂಬಿಕ ಸುರೇಶ್

---Advertisement---

ಸುದ್ದಿಒನ್, ಚಿತ್ರದುರ್ಗ, ಡಿ.29: ಮಕ್ಕಳಿಗೆ ಕಿರಿಯ ವಯಸ್ಸಿನಿಂದಲೇ ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಅಂಬಿಕಾ ಸುರೇಶ್ ಹೇಳಿದರು.

 

ಧಮ್ಮಾ ಜೈವಿಕ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾಸಂಸ್ಥೆ ಧಮ್ಮಾ ಡ್ರಾಮಾ ಕೇಂದ್ರ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ ಮತ್ತು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡಾಗ ಜೀವನವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆಮಾಡಲು ಸಾಧ್ಯವಿದೆ. ಆದ್ದರಿಂದ ಕಿರಿಯ ವಯಸ್ಸಿನಿಂದಲೇ ಶಿಕ್ಷಣವನ್ನು ಗಂಭೀರವಾಗಿ ತೆಗೆದುಕೊಂಡು ಸಣ್ಣ-ಸಣ್ಣ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕೆಂದು ಅಂಬಿಕಾ ಸುರೇಶ್ ಸಲಹೆ ನೀಡಿದರು.

 

ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷರಾದ ಡಾ.ಹೆಚ್.ಎಸ್.ಕೆ.ಸ್ವಾಮಿಯವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಚರಕದ ಮೂಲಕ ಜನರಲ್ಲಿ ಸ್ವಾಭಿಮಾನವನ್ನು ಬೆಳೆಸಿದ್ದಾರೆ. ಚರಕದಲ್ಲಿ ನೂಲು ತಗೆಯುವುದರೊಂದಿಗೆ ಆರ್ಥಿಕ ವಹಿವಾಟನ್ನು ವೃದ್ಧಿಸಿಕೊಳ್ಳಬಹುದು. ಹಾಗೆಯೇ ಪ್ಲಾಸ್ಟಿಕ್ ನಿಷೇಧ, ಸ್ವಚ್ಛತೆ, ಕುಡಿಯುವ ಶುದ್ಧ ನೀರು, ಸುರಕ್ಷಿತ ಪರಿಸರವನ್ನು ಕಾಯ್ದುಕೊಳ್ಳುವುದು ಗಾಂಧೀಜಿಯವರ ಆಂದೋಲನದ ಭಾಗವೇ ಆಗಿತ್ತು. ಆ ಕಾರಣಕ್ಕಾಗಿ ನಾನು ಸಬರಮತಿ ಆಶ್ರಮಕ್ಕೆ ಹೋಗಿ ಬಂದಾಗಿನಿಂದಾಗಿನಿಂದ ಗಾಂಧಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಾಲಾ ಕಾಲೇಜು ಮಕ್ಕಳಲ್ಲಿ ಗಾಂಧಿ ವಿಚಾರಧಾರೆಗಳನ್ನು ಬಿತ್ತುವಂತಹ ಕೆಲಸವನ್ನು ಮಾಡಿಕೊಂಡು ಬರಲಾಗಿದೆ ಎಂದು ಹೇಳಿದರು.
ಶಾಲಾ ಕಾಲೇಜು ಮಕ್ಕಳಲ್ಲಿ ಶೈಕ್ಷಣಿಕ ಪಠ್ಯಕ್ರಮಗಳ ಜೊತೆಯಲ್ಲಿ ಬದುಕಿಗೆ ಪೂರಕವಾದಂತಹ ಮಹಾತ್ಮರ ವಿಚಾರಧಾರೆಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯ ಎಂದು ಹೇಳಿದರು.

 

ಕಿಶೋರಿಯರ ನಕ್ಷತ್ರ ಸಂಘಟನೆಯ ಬಾಲಕಿಯರು ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ಮತ್ತು ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ಸದುದ್ದೇಶದಿಂದ ಹಲವು ಗ್ರಾಮಗಳಲ್ಲಿ ಕಿಶೋರಿಯರ ಸಂಘಟನೆಗಳನ್ನು ಮಾಡಲಾಗಿದ್ದು, ಆ ಸಂಘಟನೆಗಳ ಮೂಲಕ ಬಾಲಕಿಯರು ಮತ್ತು ಕಿಶೋರಿಯರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂ.ಆರ್.ನಗರ ಮಸೀದಿಯ ಅಧ್ಯಕ್ಷರಾದ ಮಹಮದ್ ಶಫಿಉಲ್ಲಾ, ವಿಮುಕ್ತಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಅನ್ನಪೂರ್ಣ, ನಿರ್ದೇಶಕರಾದ ಆರ್.ವಿಶ್ವಸಾಗರ್, ಸಾಮಾಜಿಕ ಕಾರ್ಯಕರ್ತರಾದ ಸುರೇಶ್, ವಿಮುಕ್ತಿ ವಿದ್ಯಾಸಂಸ್ಥೆಯಾದ ಅರಣ್ಯ ಸಾಗರ್, ಶ್ರೀಮತಿ ನಾಗರತ್ನ, ಶ್ರೀಮತಿ ಬಿಬಿ ಜಾನ್, ಹಿರಿಯ ಪತ್ರಕರ್ತ ನರೇನಹಳ್ಳಿ ಅರುಣ್‍ಕುಮಾರ್ ಉಪಸ್ಥಿತರಿದ್ದರು.
ಫೋಟೋ ವಿವರ: ವಿಮುಕ್ತಿ ವಿದ್ಯಾಸಂಸ್ಥೆ ಧಮ್ಮಾ ಕೇಂದ್ರದಲ್ಲಿ ಕಿಶೋರಿಯರಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಣೆಮಾಡಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now