ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ನವಭಾರತ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಮಹತ್ವಪೂರ್ಣವಾಗಿದೆ. ಮಕ್ಕಳಲ್ಲಿ ದೇಶಾಭಿಮಾನದ ಬಗ್ಗೆ ಅರಿವನ್ನು ಮೂಡಿಸಬೇಕು ಎಂದು ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶ.ಸಾ.ಪ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್ ಅಭಿಪ್ರಾಯಪಟ್ಟರು.
ನಗರದ ಪಿಳ್ಳೇಕರೇನಹಳ್ಳಿಯ ಬಾಪೂಜಿ ಶಿಕ್ಷಣ ವಿದ್ಯಾಸಂಸ್ಥೆ ಆವರಣದಲ್ಲಿ 79ನೆಯ ಸ್ವಾಂತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಸ್ವಾತಂತ್ರ್ಯಕ್ಕಾಗಿ ಮಡಿದ ಮಹನೀಯರ ಜೀವನ ಕ್ರಮವನ್ನು ಮಕ್ಕಳಿಗೆ ಪರಿಚಯಿಸುವ ಅವಶ್ಯಕತೆಯಿದೆ ಎಂದರು.
ನಿವೃತ್ತ ಡಿವೈಎಸ್‍ಪಿ ಸೈಯದ್ ಇಸಾಕ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ ಮಕ್ಕಳಿಗೆ ಶಿಸ್ತು, ಶ್ರದ್ಧೆ ಮತ್ತು ಏಕಾಗ್ರತೆ ಸಾಧಿಸುವ ಬೌದ್ಧಿಕಮಟ್ಟವನ್ನು ಶ್ರೀಮಂತಗೊಳಿಸುವ ಕೆಲಸ ನಡೆಸಬೇಕಾಗಿದೆ ಎಂದರು. ಸಂಸ್ಥೆಯ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ರಾಷ್ಟ್ರಪತಿ ಎಪಿಜೆ.ಅಬ್ದುಲ್‍ಕಲಾಂ ರವರ ಜೀವನಕ್ರಮವನ್ನು ಪರಿಚಯಿಸಿ ಅವರಂತೆ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಂಸ್ಥೆಯ ನಿರ್ದೇಶಕಿ ಮೇಘನಾಚೇತನ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಎಂ.ಆರ್.ಜಯಲಕ್ಷ್ಮಿ, ಪದವಿ ಕಾಲೇಜಿನ ಪ್ರಾಚಾರ್ಯೆ ಮಂಜುಳ, ಪಿಯು ಕಾಲೇಜಿನ ಜ್ಞಾನದೇವ್, ಪ್ರಾಚಾರ್ಯ ವೀರೇಶ್, ಪ್ರೌಢಶಾಲೆಯ ಮುಖ್ಯಸ್ಥರಾದ ಮಾರುತೇಶ್, ನಫೀಜಾಬಾನು, ಬಾಪೂಜಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಬಿ.ಜಿ.ಪದ್ಮಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಾಪೂಜಿ ಸಂಸ್ಥೆಯಿಂದ ಎನ್‍ಐಟಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಹಾಗೂ ಹೆಚ್ಚುಅಂಕ ಗಳಿಸಿದ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಬಾಪೂಜಿ ಶಾಲಾಮಕ್ಕಳಿಂದ ದೇಶಾಭಿಮಾನ ಮೂಡಿಸುವ ಆಕರ್ಷಕ ನೃತ್ಯ ಪ್ರದರ್ಶನ ನೆರವೇರಿತು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






