Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಜಿಟಲ್ ಯುಗದಲ್ಲೂ ಪತ್ರಿಕೆ ಓದಿನ ಮಹತ್ವ ಒತ್ತಿಹೇಳಿದ ಲಿಖಿತ್

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 02 : ಮಕ್ಕಳು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ದಿನ ಪತ್ರಿಕೆಗಳನ್ನು ಓದುವುದರಿಂದ ಸಾಮಾಜಿಕ ಮತ್ತು ಪ್ರಸ್ತುತ ವಿದ್ಯಮಾನಗಳನ್ನು ತಿಳಿಯಬಹುದಷ್ಟೇ ಅಲ್ಲದೇ ಜ್ಞಾನಾರ್ಜನೆ ಜೊತೆಗೆ ನೆನಪಿನ ಶಕ್ತಿಯು ಸಹ ಉಳಿಯುತ್ತದೆ ಎಂದು ಯುವ ಪತ್ರಕರ್ತ ಎಸ್.ಎಮ್. ಲಿಖಿತ್ ಹೇಳಿದರು.

ನಗರದ ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರ ವತಿಯಿಂದ ಶುಕ್ರವಾರ ನಡೆದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಇಂದು ಪತ್ರಿಕೆ ಮಾಧ್ಯಮ ಮತ್ತು ಮಕ್ಕಳು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಧುನಿಕ ಸಾಮಾಜಿಕ ಜಾಲತಾಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಹಾವಳಿಯಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಪತ್ರಿಕೆ ಒಂದು ದಾಖಲಿಕರಣವಾಗುವುದರಿಂದ ಓದುವುದನ್ನು ರೂಢಿಸಿಕೊಳ್ಳಬೇಕು. ನಾನು ಬಾಲ ಭವನದ ಬೇಸಿಗೆ ಶಿಬಿರದ ಶಿಬಿರಾರ್ಥಿಯಾಗಿ ಈ ಹಿಂದೆ ಬಂದಿದ್ದೇನೆ. ಬಾಲ ಭವನ ಬೇಸಿಗೆ ಶಿಬಿರದಲ್ಲಿ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಲು ಬಹಳ ಉಪಯುಕ್ತವಾಗುತ್ತದೆ. ಆದ್ದರಿಂದ ಮಕ್ಕಳು ಬೇಸಿಗೆ ಶಿಬಿರಗಳ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಕುಮಾರ್ ಮಾತನಾಡಿ, ಮಕ್ಕಳಿಗೆ ಬೆಳೆಯುವ ವಯಸ್ಸಿನಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ನಿಟ್ಟಿನಲ್ಲಿ ರಾಜ್ಯ ಬಾಲ ಭವನವು ಮಕ್ಕಳಿಗೆ ಶಿಬಿರವವನ್ನು ಹಮ್ಮಿಕೊಂಡಿದೆ. ಇಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗಿರುತ್ತವೆ. ರಾಜ್ಯ ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್. ನಾಯ್ಡು ಕಾರ್ಯದರ್ಶಿಗಳಾದ ನಿಶ್ಚಲ್ ರವರ ಆದೇಶದಂತೆ ಚಿತ್ರದುರ್ಗ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ|| ಎಸ್. ಆಕಾಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಎಚ್. ವಿಜಯಕುಮಾರ್, ನಿರೂಪಣ ಅಧಿಕಾರಿ ಡಿ. ಮಂಜುನಾಥ್ ರವರ ಸಲಹೆ ಸೂಚನೆ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ೧೫ ದಿನಗಳ ಕಾಲ ಮಕ್ಕಳ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಬಾಕಸ್ ಶಿಕ್ಷಕ ತಿಪ್ಪೇರುದ್ರಪ್ಪ, ಕರಾಟೆ ಶಿಕ್ಷಕರಾದ ಶ್ರೀಮತಿ ಚಂದನಾ, ಚಿತ್ರಕಲೆ ಶಿಕ್ಷಕರಾದ ಶ್ರೀಮತಿ ಮಂಜುಳಾ ಹವನೂರು, ನೃತ್ಯ ಶಿಕ್ಷಕರಾದ ಶ್ರೀಮತಿ ಕೆ. ಪವಿತ್ರಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...