ಸುದ್ದಿಒನ್, ಚಿತ್ರದುರ್ಗ, ನವೆಂಬರ್.18 :ಮಕ್ಕಳು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ವಿರಕ್ತಮಠದ ಚನ್ನಬಸವಸ್ವಾಮೀಜಿ ಹೇಳಿದರು.
ನಗರದ ಹೊರ ವಲಯದಲ್ಲಿ ಎಸ್.ಜೆ.ಎಸ್ ಸಮೂಹ ಸಂಸ್ಥೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಉತ್ತಮ ಸಂಸ್ಥೆಯನ್ನು ರೂಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಬೆಳೆಯಬೇಕು. ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಶ್ರಮಪಟ್ಟು ಕಟ್ಟಿರುವ ಶಾಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ರಾಕೇಶ್ ಮಾತನಾಡಿ, ಮಕ್ಕಳು ಮುಂದಿನ ಪ್ರಜೆಗಳು ನೆಹರೂರವರ ಜನ್ಮದಿನದಂದು ಸಾಂಕೇತಿಕವಾದ ಮಕ್ಕಳ ಆಚರಿಸುತ್ತೇವೆ ಎನ್ನುವುದರ ಬಗ್ಗೆ ಹೇಳಿದರು.
ಚೈತ್ರ ಮಾತನಾಡಿ, ಇವತ್ತಿಗೆ ಕರ್ನಾಟಕ ಎಂಬ ನಾಮಕರಣ ಮಾಡಿ 50 ವರ್ಷಗಳ ಸಂಭ್ರಮ, ಭಾಷಾವಾರು ಪ್ರಾಂತ್ಯಗಳಾಗಿ ಬೇರ್ಪಡಿಸಿದಾಗ ಕನ್ನಡ ಮಾತನಾಡುವ ಪ್ರದೇಶಕ್ಕೆ ಕರ್ನಾಟಕ ಎಂಬ ನಾಮಕರಣ ಮಾಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು. ಬೋಧಕ ಮತ್ತು ಬೋಧಕೇತರ ವರ್ಗ ಭಾಗವಹಿಸಿತ್ತು.