ಚಿತ್ರದುರ್ಗ : ವಿಕಲಚೇತನ ಮಕ್ಕಳು ತಮ್ಮ ದೈನಂದಿನ ಕೆಲಸಗಳನ್ನು ತಾವೇ ಮಾಡಿಕೊಳ್ಳುವಂತೆ ವಿಶೇಷ ತರಬೇತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಎಪಿಡಿ ಸಂಸ್ಥೆಯ ಸಹಯೋಗದೊಂದಿಗೆ ಇಲ್ಲಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.
ಅಂಗವಿಕಲ ಹಾಗೂ ಅಂಧ ಮಕ್ಕಳ ಬಗ್ಗೆ ಪೋಷಕರಿಗೆ ವಿಶೇಷ ಕಾಳಜಿಯಿರಬೇಕು. ವಿಕಲಚೇತನ ಮಕ್ಕಳ ಬಗ್ಗೆ ಅನುಕಂಪ ತೋರುವ ಬದಲು ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಿದಾಗ ಸಮಾಜದಲ್ಲಿ ಎಲ್ಲರಂತೆ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.
ಬಿ.ಆರ್.ಸಿ.ಸಂಪತ್‌ಕುಮಾರ್ ಮಾತನಾಡಿ ವಿಶೇಷ ಚೇತನ ಮಕ್ಕಳಿಗೆ ಅನುಕಂಪ ತೋರುವುದಕ್ಕಿಂತ ಮುಖ್ಯವಾಗಿ ಅವಕಾಶ ಕಲ್ಪಿಸಿಕೊಡುವ ಹೊಣೆಗಾರಿಕೆ ಎಲ್ಲರ ಮೇಲಿದೆ. ವಿಕಲಚೇತನ ಮಕ್ಕಳನ್ನು ದೇವರ ಮಕ್ಕಳಂತೆ ಕಾಣುವುದರ ಜೊತೆಗೆ ಇಲಾಖೆಯಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ವೈದ್ಯಕೀಯ ತಪಾಸಣೆಯಲ್ಲಿ ಗುರುತಿಸಲಾದ 85 ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ತಿಮ್ಮಾರೆಡ್ಡಿ ಕೆ.ಟಿ. ಎಪಿಡಿ.ಸಂಸ್ಥೆಯ ಪಿಜಿಯೋಥೆರಪಿಸ್ಟ್ ವಿಶಾಲ, ರಜನಿಕಾಂತ್, ಮಹಾಂತೇಶ್, ಎನ್.ರಾಜಣ್ಣ, ಕೆ.ರೇವಣ್ಣ, ಪುಷ್ಪಲತಾ ಇವರುಗಳು ಹಾಜರಿದ್ದರು.