ಬೆಂಗಳೂರು: ಗ್ರಾಮೀಣ ಭಾಗದ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಚೆನ್ನಾಗಿದೆ, 1ರಿಂದ 5ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ, ಎಲ್ಕೆಜಿ, ಯುಕೆಜಿ ಆರಂಭ ಮಾಡ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಈ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಲೆ ಆರಂಭಿಸುವ ಎಲ್ಲ ಪ್ರಯತ್ನದಲ್ಲೂ ನಾವು ಯಶಸ್ಸು ಕಂಡಿದ್ದೇವೆ. ಶೇ.20 ರಷ್ಟು ಇನ್ನೂ ಸಫಲವಾಗಿಲ್ಲ, ಅದನ್ನು ಪೂರ್ಣಗೊಳಿಸುತ್ತೇವೆ.
ಗ್ರಾಮೀಣ ಭಾಗದಲ್ಲಿ ನಾನು ಭೇಟಿ ನೀಡಿದ ಎರಡು ಶಾಲೆಯಲ್ಲೂ 504 ಮಕ್ಕಳ ಹಾಜರಾತಿ ಇತ್ತು. ಉತ್ತಮ ಪ್ರತಿಕ್ರಿಯೆ ಇದೆ. ಶಿಕ್ಷಣ ಇಲಾಖೆಯ ಜೊತೆ ಆರ್‌ಡಿಪಿಆರ್ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಂಡು ಮಕ್ಕಳನ್ನು ಶಾಲೆಗೆ ಕರೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಮನೆ ಮನೆಗೆ ಹೋಗಿ ಮಕ್ಕಳನ್ನು ಕರೆತರುವ ಕೆಲಸ ಮಾಡ್ತಿದ್ದೇವೆ ಎಂದರು.
ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ. ಆದರೆ ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ, ಎಲ್ಲಿ ಹೋಗಿದ್ದಾರೆ ಎಂದು ತಿಳಿಯುತ್ತಿಲ್ಲ. ಅವರನ್ನು ಹುಡುಕಿ ಕರೆತರುವ ಪ್ರಯತ್ನ ಮಾಡುತ್ತೇವೆ.
ಚಿಕ್ಕಮಗಳೂರಿನಲ್ಲಿ145 ಮಕ್ಕಳು ಹೊರಗುಳಿದಿದ್ರು, 102 ಮಕ್ಕಳನ್ನು ಕರೆತಂದಿದ್ದೇವೆ ಎಂದು ತಿಳಿಸಿದರು. ಇನ್ನೂ ಶಿಕ್ಷಕರ ಕೊರತೆ ವಿಚಾರವಾಗಿ ಮಾತನಾಡಿ, ಪ್ರೈಮರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇಲ್ಲ. 6 ರಿಂದ 8ನೇ ತರಗತಿವರೆಗಿನ ಶಿಕ್ಷಕರ ಕೊರತೆ ಇದೆ. ಅದನ್ನು ತುಂಬುವ ಕೆಲಸ ಮಾಡ್ತೇವೆ ಎಂದು ಭರವಸೆ ಕೊಟ್ಟರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…