Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಾಲ ವೈಜ್ಞಾನಿಕ್ ಪ್ರದರ್ಶಿನಿ ಸ್ಪರ್ಧೆ : ಚಿತ್ರದುರ್ಗದ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಎನ್ ಪಲ್ಲವಿ ರಾಜ್ಯ ಮಟ್ಟದ ಸ್ತರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿ ಕಾರ್ಯಕ್ರಮ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಸಂಶೋಧನಾ ಮತ್ತು ತರಬೇತಿ ಇಲಾಖೆ ಬೆಂಗಳೂರು ವತಿಯಿಂದ ಅಕ್ಟೋಬರ್ 4 ರಂದು DSERT ಆವರಣದಲ್ಲಿ ಈ ಸ್ಪರ್ಧೆ ಏರ್ಪಡಿಸಲಾಗಿತ್ತು.

ತ್ಯಾಜ್ಯ ನಿರ್ವಹಣೆ ಎಂಬ ವಿಷಯದಲ್ಲಿ ಪ್ಲಾಸ್ಟಿಕ್ ಕವರ್ ಗಳಿಂದ ಜೆಲ್ಲಿ ಕಲ್ಲು ತಯಾರಿಕೆ ಹಾಗೂ ಥರ್ಮೋ ಕೂಲ್ ತ್ಯಾಜ್ಯದಿಂದ ತಯಾರಿಸಲಾದ ರಾಳ ಮಾದರಿಯು ವಿನೂತನವಾಗಿದ್ದು ಪ್ರಸ್ತುತ ಸನ್ನಿವೇಶದಲ್ಲಿ ಪ್ಲಾಸ್ಟಿಕ್ ನ ತ್ಯಾಜ್ಯ, ಹಾಗೂ ಅದರ ವಿಲೇವಾರಿ ಬಹು ದೊಡ್ಡ ಸಮಸ್ಯೆಯಾಗಿದ್ದು ಅದನ್ನು ಮರುಬಳಕೆ ಮಾಡುವ ತಂತ್ರವನ್ನು ಬಾಲ ವಿಜ್ಞಾನಿಯಾದ ಪಲ್ಲವಿ ಅವರು ಸಾಧಿಸಿ ತೋರಿಸಿದ್ದಾರೆ. ಪರಿಸರಕ್ಕೆ ಮಾಲಿನ್ಯಕಾರಕ ವಾಗದಂತೆ ಅದನ್ನು ಜೆಲ್ಲಿಕಲ್ಲಾಗಿ ನಿರ್ಮಾಣ ಮಾಡಿ ಮರುಬಳಕೆ ಮಾಡುವ ವಿಧಾನವನ್ನು ಪ್ರಾಯೋಗಿಕವಾಗಿ ಸಾಬೀತು ಮಾಡಿ ತೋರಿಸಿದ ಮಾದರಿಯು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ರಾಷ್ಟ್ರ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಪ್ರಾಧ್ಯಾಪಕರಾದ ಶ್ರೀಮತಿ ರುಚಿ ವರ್ಮ ಮಾದರಿಯನ್ನು ಶ್ಲಾಘಿಸಿದ್ದಾರೆ.

ಇನ್ನು ಪ್ಲಾಸ್ಟಿಕ್ ಜೆಲ್ಲಿಕಲ್ ಅನ್ನು ಸಿಮೆಂಟ್ ಕಾಂಕ್ರಿಟ್ ತಯಾರಿಕೆಯಲ್ಲಿ ಉಪಯೋಗಿಸಿ ಕಟ್ಟಡ, ರಸ್ತೆ ನಿರ್ಮಾಣದಲ್ಲಿ ಬಳಸಬಹುದಾಗಿದೆ. ನವಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ 52 ನೆಯ ರಾಷ್ಟ್ರಮಟ್ಟದ ಬಾಲ ವೈಜ್ಞಾನಿಕ್ ಪ್ರದರ್ಶಿನಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ ವಿಜ್ಞಾನ ಶಿಕ್ಷಕ ನಾಗಭೂಷಣ್ ಮಾರ್ಗದರ್ಶನ ಮಾಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಈ ಸಾಧನೆಗೆ ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ.ಎಸ್ ಸುರೇಶ್, ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್, ಎಸ್.ಡಿ. ಎಂ.ಸಿ ಅಧ್ಯಕರಾದ ಕಾಟಯ್ಯ, ಶಾಲಾ ಸಿಬ್ಬಂದಿ ಹಾಗೂ ಊರಿನ ಗ್ರಾಮಸ್ಥರು, ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...