ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬಳ್ಳಾರಿ: ಜಿಲ್ಲೆಯ ಸುತ್ತಮುತ್ತ ಮೆಣಸಿನಕಾಯಿ ಬೆಳೆಯನ್ನ ಹೆಚ್ಚಾಗಿ ಬೆಳೆಯುತ್ತಾರೆ. ಹೀಗಾಗಿ ಇಲ್ಲಿನ ಜನಕ್ಕೆ ಮೆಣಸಿನಕಾಯಿ ಮಾರುಕಟ್ಟೆಯ ಅಗತ್ಯತೆ ತುಂಬಾ ಇದೆ. ಇದೀಗ ಬಳ್ಳಾರಿ ಭಾಗದ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಮೆಣಸಿನಕಾಯಿ ಬೆಳೆಯುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಕೃಷಿ ಮಾರುಕಟ್ಟೆ ಖಾತೆ ಸಚಿವೆ ವ ಶಿವಾನಂದ ಪಾಟೀಲ ಅವರು ಬಳ್ಳಾರಿ ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಮಾಡುವ ಕುರಿತು ಭರವಸೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರು, ಮಾರುಕಟ್ಟೆಗೆ ಖರೀದಿದಾರರನ್ನು ಕರೆತರುವ ಜವಾಬ್ದಾರಿ ನಮ್ಮದು. ಅತಿ ಹೆಚ್ಚು ಮೆಣಸಿನಕಾಯಿ ಬೆಳೆ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲು ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಜೊತೆಗೆ ಚಿಲ್ಲಿ ಮಾರುಕಟ್ಟೆಯನ್ನೂ ನಿರ್ಮಾಣ ಮಾಡಲಾಗುವುದು. ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಿದ್ದು, ಇತರ ಮೂಲಗಳಿಂದ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು. ಶಾಸಕ ನಾರಾ ಭರತ್ ರೆಡ್ಡಿ ಅವರು ಸಹ ನೆರವಿನ ಭರವಸೆ ನೀಡಿದ್ದಾರೆ.
ಈಗ ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಗುರುತಿಸಿರುವ 23 ಎಕರೆ ಪ್ರದೇಶ ಕಡಿಮೆಯಾಗಲಿದೆ. ಭವಿಷ್ಯದ ದೃಷ್ಟಿಯಿಂದ ಕನಿಷ್ಠ 50 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುವುದು ಸೂಕ್ತ. ಪಿಪಿಪಿ ಮಾಡೆಲ್ ನಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಕಷ್ಟ ಸಾಧ್ಯ. ಹೀಗಾಗಿ ಈ ಯೋಜನೆ ಬದಲಿಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ಎಪಿಎಂಸಿ ಸಚಿವನಾಗಿ ಈ ಜಿಲ್ಲೆಯಲ್ಲ ಚಿಲ್ಲಿ ಿ ನಿರ್ಮಾಣ ಮಾಡುವೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್