ಬೆಂಗಳೂರು: ಚಿಲುಮೆ ಸಂಸ್ಥೆ ಮತದಾರರ ಡೇಟಾವನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ಬಹಳ ಸ್ಟ್ರಾಂಗ್ ಆಗಿ ಮಾಡಿತ್ತು. ಅದಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದೀಗ ಆ ಪ್ರಕರಣದಲ್ಲಿ ಆರೋಪಿಯಾಗಿದ್ದಂತ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಕ್ರಮವನ್ನು ರಾಜ್ಯ ಸರ್ಕಾರ ಹಿಂದಕ್ಕೆ ತೆಗೆದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿದೆ.
ಚಿಲುಮೆ ಡೇಟಾ ಸಂಗ್ರಹ ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಹಾಗೂ ರಂಗಪ್ಪ ಅವರ ಹೆಸರುಗಳು ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಸೇವೆಯಿಂದ ವಜಾ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ ಇಬ್ಬರಿಗೂ ಜಾಮೀನು ಸಿಕ್ಕಿದೆ. ಹೀಗಾಗಿ ಸರ್ಕಾರ ಮತ್ತೆ ಇಬ್ಬರಿಗೂ ಪ್ಲೇಸ್ಮೆಂಟ್ ಒದಗಿಸಿಕೊಟ್ಟಿದೆ.
ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ.