ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣಾ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರಚಾರ ಬಿರುಸಾಗಿ ಸಾಗುತ್ತಿದೆ. ಈ ಮಧ್ಯೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ಮೇಲೆ ಮಾತಿನ ದಾಳಿ ನಡೆಸಿದ್ದಾರೆ.
पंजाब की जनता के नाम पूर्व प्रधानमंत्री डॉ. मनमोहन सिंह जी का संदेश। pic.twitter.com/EYkPWZObo2
— Congress (@INCIndia) February 17, 2022
ಬಿಜೆಪಿ ಸರ್ಕಾರದಲ್ಲಿ ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಶ್ರೀಮಂತರು ಶ್ರೀಮಂತರಗುತ್ತಿದ್ದಾರೆ. ಈ ಸರ್ಕಾರ ಆಡಳಿತದ ವಿಚಾರದಲ್ಲಿ ವೈಫಲ್ಯ ಕಂಡಿದೆ. ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ ಎಂದು ಹರಿಹಾಯ್ದಿದ್ದಾರೆ.
ಆಹ್ವಾನವಿಲ್ಲದೆ ಬಿರಿಯಾನಿ ತಿನ್ನಲು ಹೋಗುವುದರಿಂದ ಮತ್ತು ರಾಜಕಾರಣಿಗಳಿಗೆ ಅಪ್ಪುಗೆ ನೀಡುವುದರಿಂದ ಸಂಬಂಧಗಳು ಸುಧಾರಿಸಲ್ಲ. ಚೀನಾ ಬಂದು ನಮ್ಮ ಗಡಿಯಲ್ಲಿ ಕುಳಿತಿದೆ. ಆದ್ರೆ ಇದನ್ನು ಮರೆಮಾಚುವ ಯತ್ನ ನಡೆಯುತ್ತಿದೆ. ಭದ್ರತೆ ವಿಚಾರದಲ್ಲಿ ಪಂಜಾಬ್ ಸರ್ಕಾರವನ್ನು ಟಾರ್ಗೆಟ್ ಮಾಡಲಾಗಿದೆ. ಈ ಮೂಲಕ ಪಂಜಾಬ್ ಜನರನ್ನು ಅವಮಾನಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.