Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದೊಡ್ಡಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಪ್ರೌಢಶಾಲೆಗೆ ಶೇ 100 ಫಲಿತಾಂಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಪ್ರೌಢಶಾಲೆಯು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ಸಮಾನ ಆದ್ಯತೆ ನೀಡುತ್ತಾ ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣವಾಗಿದೆ. 2025-26 ನೇ ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷವೂ ಶೇ 100 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ.

ಈ ವರ್ಷ ಪರೀಕ್ಷೆಗೆ ಹಾಜರಾದ ಒಟ್ಟು 87 ವಿದ್ಯಾರ್ಥಿಗಳಲ್ಲಿ, ಅತ್ಯುತ್ತಮ ಶ್ರೇಣಿಯಲ್ಲಿ 19 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 58,  ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಲ್ಲಿ ಲಿಖಿತಾ ಆರ್. ಅವರು 597 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ:-
• ಲಿಖಿತಾ. ಆರ್. 597 ಅಂಕಗಳು (95.52%)
• ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 05
• ಹಿಂದಿಯಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 03
• ಸಮಾಜ ವಿಜ್ಞಾನದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು – 01

ಈ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ರೆಡ್ಡಿಯವರು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿಯವರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...