Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ: ಜಿಲ್ಲೆಯಲ್ಲಿ 13.80 ಲಕ್ಷ ಮತದಾರರು : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಜನವರಿ.05: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ 1380670 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಅನ್ವಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿ ಪ್ರಚುರಪಡಿಸಿ ಅವರು ಮಾತನಾಡಿದರು.

ಕರಡು ಮತದಾರರ ಪಟ್ಟಿ ಪ್ರಕಟಣೆಯನ್ವಯ ಈ ಮೊದಲು ಜಿಲ್ಲೆಯಲ್ಲಿ 13,48,457 ಮತದಾರರಿದ್ದರು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರ ಜಿಲ್ಲೆಯಲ್ಲಿ 13,80,670 ಮತದಾರರಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 46,235 ಮತದಾರರು ಸೇರ್ಪಡೆಯಾಗಿದ್ದಾರೆ. ಇದರಲ್ಲಿ 20 ಸಾವಿರ ಯುವ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.

ಕರಡು ಮತದಾರರ ಪಟ್ಟಿ ಪ್ರಕಟಣೆ ನಂತರ 92 ಸಾವಿರ ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳನ್ನು ಹಲವು ಹಂತಗಳಲ್ಲಿ ಪರಿಶೀಲನೆ ಮಾಡಲಾಗಿದೆ.

ಅಲ್ಲದೆ ವಿವಿಧ ಹಂತಗಳಲ್ಲಿ ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿರುವವರನ್ನು ಅಂತಿಮಗೊಳಿಸಲಾಗಿದೆ ಎಂದರು.

2022ರ ಜನವರಿಯಿಂದ ಅಕ್ಟೋಬರ್‍ವರೆಗೂ 18 ವರ್ಷ ವಯಸ್ಸಿನ ಯುವ ಮತದಾರರು 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು.  ವಿಶೇಷವಾಗಿ ಪಿಯು ಕಾಲೇಜು, ಪದವಿ ಕಾಲೇಜು, ಇಂಜಿನಿಯರ್ ಕಾಲೇಜು, ಐಟಿಐ,  ಡಿಪ್ಲೋಮಾ, ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಿ, ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ ಎಂದರು.
31050 ಯುವ ಮತದಾರರು:  ಕರಡು ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದ 11122 ಯುವ ಮತದಾರರಿದ್ದು, ಅಂತಿಮ ಪಟ್ಟಿಯನ್ವಯ ಈ ಸಂಖ್ಯೆ 31050 ಕ್ಕೆ ಏರಿಕೆಯಾಗಿದೆ. 382 ಸೇವಾ ಮತದಾರರಿದ್ದು ನೋಂದಾಯಿಸಿದ್ದಾರೆ ಎಂದರು.

ಚುನಾವಣೆ ವರ್ಷವಾಗಿರುವುದರಿಂದ ಬಹಳ ಎಚ್ಚರಿಕೆಯಿಂದ ಮತದಾನ ಪರಿಷ್ಕರಣೆ ಕಾರ್ಯಕೈಗೊಳ್ಳಲಾಗಿದೆ. ಪ್ರತಿಯೊಂದು ಅರ್ಜಿಯನ್ನು ಎಇಆರ್‍ಓ ಹಾಗೂ ಇಆರ್‍ಓ, ಜಿಲ್ಲಾಧಿಕಾರಿಗಳು ಸೇರಿದಂತೆ, ಜಿಲ್ಲಾ ಪಂಚಾಯಿತಿ ವತಿಯಿಂದಲೂ ವಿವಿಧ ಹಂತಗಳಲ್ಲಿ ದಾಖಲೆಗಳ ಪರಿಶೀಲನೆ ಮಾಡಿ ಸೂಪರ್ ಚೆಕ್ಕಿಂಗ್ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಚುನಾವಣೆ ಆಯೋಗದ ಅಪರ ಕಾರ್ಯದರ್ಶಿಗಳು ಸೇರಿದಂತೆ ಹಲವರು ಸೂಪರ್‍ಚೆಕ್ ಕಾರ್ಯಕ್ರಮ ಮೂಲಕ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಾಗ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮರಣ, ಡಬಲ್ ಎಂಟ್ರಿ ಸೇರಿದಂತೆ ಒಟ್ಟು 14057 ಮತದಾರರನ್ನು ನಿಯಮಾನುಸಾರವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.  ಒಟ್ಟು 15312 ಮತದಾರರ ಹೆಸರು, ಭಾವಚಿತ್ರ ಬದಲಾವಣೆ, ತಂದೆ, ಗಂಡನ ಹೆಸರು ಹಾಗೂ ವಿಳಾಸ ತಿದ್ದುಪಡಿ ಮಾಡಲಾಗಿದೆ ಎಂದರು.

ಭಾರತ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ಮಾಡಿ ಮತದಾರರ ನೋಂದಣಿ ನಿಯಮಗಳು 1960ಕ್ಕೆ ಅನುಗುಣವಾಗಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು 4 ಅರ್ಹತಾ ದಿನಾಂಕಗಳನ್ನು ನೀಡಿ, ಅವಕಾಶ ಕಲ್ಪಿಸಿದ್ದು, 2023ರ ಜನವರಿ 1, ಏಪ್ರಿಲ್ 1, ಜುಲೈ 1, ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿ ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನ ಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ.

www.ceokarntaka.nic.in, https://chitradurga.nic.in   ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು VHA App ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಮತಗಟ್ಟೆ ಮಟ್ಟದ ಏಜೆಂಟರನ್ನು ಶೀಘ್ರವಾಗಿ ನೇಮಕ ಮಾಡಿ, ಪಟ್ಟಿ ನೀಡಬೇಕು.  ಏಜೆಂಟರು ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಗೆ ಅರ್ಹ ಸೇರಿಸುವ, ಬಿಡತಕ್ಕ, ತಿದ್ದುಪಡಿ, ಮಾಡಲು ಬಿಎಲ್‍ಓಗಳಿಗೆ ಸಹಾಯ ಮಾಡುವಂತೆ ಕೋರಿದರು.

ಮತದಾರರ ಭಾವಚಿತ್ರವಿರುವ ಗುರತಿನ ಚೀಟಿಯು ನೇರವಾಗಿ ಆಯಾ ಮತದಾರರ ವಿಳಾಸಕ್ಕೆ ಅಂಚೆ ಮೂಲಕ ಉಚಿತವಾಗಿ ತಲುಪಿಸಲಾಗುವುದು. ಗುರುತಿನ ಚೀಟಿಯನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ತಲುಪಿಸುವುದಕ್ಕೆ ಈಗಾಗಲೇ ಅಂಚೆ ಅಧೀಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದರು.

ಎಪಿಕ್ ಕಾರ್ಡ್ ಕಳೆದುಹೋದಲ್ಲಿ ಅಥವಾ ಬದಲಿ ಕಾರ್ಡ್ ಪಡೆಯಲು ಸಂಬಂಧಪಟ್ಟ ಬಿಎಲ್‍ಓ, ತಹಶೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಯೇ ಅರ್ಜಿಯನ್ನು ಸಲ್ಲಿಸಿ, ಉಚಿತವಾಗಿ ಕಾರ್ಡ್ ಪಡೆಯಬಹುದಾಗಿದೆ.

ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪಡೆಯುವುದಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲ, ಸಂಶಯಗಳಿದ್ದಲ್ಲಿ ಮತದಾರರ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪರಿಹರಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಫಾರೂಕ್, ವೆಂಕಟೇಶ್ ಯಾದವ್, ಪ್ರತಾಪ್ ಜೋಗಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!