ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಿತ್ರದುರ್ಗ, ಮೇ. 27 : ಕೆಎಸ್ ಆರ್ ಟಿಸಿ ಬಸ್ ಹರಿದು ಕುರಿಗಾಹಿ ಹಾಗೂ 21 ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಈರಜ್ಜನಹಟ್ಟಿಯಲ್ಲಿ ಬಳಿ ಸಂಭವಿಸಿದೆ.
ಮೃತನನ್ನು ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿಯ ರಾಜಪ್ಪ (30) ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವ ಕುರಿಗಾಹಿ ತಿಪ್ಪಣ್ಣ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುರಿ ಮೇಯಿಸಲು ನೇಲಗತನಹಟ್ಟಿ ಗ್ರಾಮದಿಂದ ಚನ್ನಗಿರಿಗೆ ತೆರಳಿದ್ದರು. ಈ ವೇಳೆ ಮಳೆ ಬಂದ ಕಾರಣ ಸ್ವ- ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಈರಜ್ಜನಹಟ್ಟಿ ಬಳಿ ಸರ್ಕಾರಿ ಬಸ್ ಹರಿದು 2 ಲಕ್ಷಕ್ಕೂ ಹೆಚ್ಚು ಮೌಲ್ಯದ 21 ಕುರಿಗಳ ಸಾವನ್ನಪ್ಪಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್