ಚಿತ್ರದುರ್ಗ, (ಡಿಸೆಂಬರ್17) : ಜಿಲ್ಲೆಯಲ್ಲಿ 2021-22ನೇ ಸಾಲಿನ ನವೆಂಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ ಆಗಿದ್ದು, ಬೆಳೆ ಹಾನಿಯ ಕುರಿತು ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕಾರ್ಯಯನ್ನು ಮುಗಿದಿದ್ದು ಜಿಲ್ಲೆಯ ರೈತರಿಗೆ 52 ಕೋಟಿಯಷ್ಟು ಹಣ ಅವರ ಖಾತೆಗೆ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಶೇಂಗಾ ಬೆಳೆಯಲ್ಲಿ ಒಟ್ಟು 56119 ಹೆಕ್ಟೇರ್, ರಾಗಿ ಬೆಳೆಯಲ್ಲಿ 19030 ಹೆಕ್ಟೇರ್, ಕಡಲೆ ಬೆಳೆಯಲ್ಲಿ 15307 ಹೆಕ್ಟೇರ್, ಮೆಕ್ಕೆಜೋಳದಲ್ಲಿ 1979 ಹೆಕ್ಟೇರ್ ಹಾಗೂ ಇತರೆ ಬೆಳೆಗಳಲ್ಲಿ 870.40 ಹೆಕ್ಟೇರ್ಗಳಂತೆ ಒಟ್ಟು 93305.40 ಹೆಕ್ಟೇರ್ಗಳಷ್ಟು ಬೆಳೆಹಾನಿಯಾಗಿರುವುದು ವರದಿಯಾಗಿದೆ.
ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 02 ರಿಂದ 16 ರವರೆಗೆ ಒಟ್ಟು 13 ಹಂತಗಳಲ್ಲಿ ಚಿತ್ರದುರ್ಗ ಜಿಲ್ಲೆಯ 77678 ರೈತ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಒಟ್ಟು ಮೊತ್ತ ರೂ. 520614275 ಹಣ ಬಿಡುಗಡೆಯಾಗಿರುತ್ತದೆ.
ಉಳಿದ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…