Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲೋಕ ಅದಾಲತ್ ನಲ್ಲಿ ಒಂದಾದ 9 ಜೋಡಿ ; 3,840 ಪ್ರಕರಣಗಳು ಇತ್ಯರ್ಥ

---Advertisement---

 

ಚಿತ್ರದುರ್ಗ. ಡಿ.15: ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.13ರಂದು ಶನಿವಾರ ನಡೆದ 2025ರ ವರ್ಷದ ಕೊನೆಯ ಮೆಗಾ ಲೋಕ್ ಅದಾಲತ್‍ನಲ್ಲಿ ಒಟ್ಟು 09 ಜೋಡಿಗಳು ತಮ್ಮ ವೈವಾಹಿಕ ಪ್ರಕರಣಗಳಿಗೆ ಅಂತ್ಯಹಾಡಿ ಒಂದಾಗಿದ್ದಾರೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಡಿ.13ರಂದು ಎರಡನೇ ಶನಿವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ ಅವರ ನೇತೃತ್ವದಲ್ಲಿ ಮೆಗಾ ಲೋಕ ಅದಾಲತ್ ನಡೆಸಲಾಯಿತು.
ಜಿಲ್ಲೆಯಲ್ಲಿನ 09 ಕೌಟುಂಬಿಕ ಪ್ರಕರಣಗಳಲ್ಲಿನ ವಿವಾದಗಳನ್ನು ಬಗೆಹರಿಸಿ ದೂರ-ದೂರ ಇದ್ದ ಪತಿ-ಪತ್ನಿಯನ್ನು ಒಂದು ಮಾಡಿ ಒಟ್ಟಿಗೆ ಜೀವನ ಮಾಡುವಂತೆ ಸಂಧಾನ ಮಾಡಲಾಯಿತು.

 

ಈ ಲೋಕ್ ಅದಾಲತ್‍ನಲ್ಲಿ ಚಾಲ್ತಿಯಲ್ಲಿರುವ ಒಟ್ಟು 4,913 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳ ಪೈಕಿ 3,840 ಪ್ರಕರಣಗಳು ರಾಜಿಯಾಗಿರುತ್ತವೆ. ಅವುಗಳಲ್ಲದೇ ವ್ಯಾಜ್ಯ ಪೂರ್ವ ಪ್ರಕರಣಗಳು 75,637 ಪ್ರಕರಣಗಳು ರಾಜಿಯಾಗಿರುತ್ತವೆ. ಅವುಗಳಲ್ಲಿ ವಿಶೇಷವಾಗಿ ಚೆಕ್ ಅಮಾನ್ಯದ ಪ್ರಕರಣಗಳು ಒಟ್ಟು 168, ರಾಜಿಯಾಗಲ್ಲ ಅಪರಾಧಿಕ ಪ್ರಕರಣ 48, ಬ್ಯಾಂಕ್ ವಸೂಲಾತಿ ಪ್ರಕರಣಗಳು 57, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ 80, ಆಸ್ತಿ ಭಾಗದ ಪ್ರಕರಣ 47, ಅಮಲ್‍ಜಾರಿ ಪ್ರಕರಣಗಳು 116, ಜನನ ನೊಂದಣಿ ಪ್ರಕರಣಗಳು 595 ಸೇರಿದಂತೆ ರಾಜಿ ಸಂಧಾನದ ಮುಖಾಂತರ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಿರುತ್ತಾರೆ.

ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿರುತ್ತದೆ. ಇದರಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ಕಂದಾಯ ಪ್ರಕರಣ, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಹಾಗೂ ಭೂ ಪರಿಹಾರ ಕೇಸುಗಳು ಸೇರಿ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅನೇಕ ಪ್ರಕರಣಗಳು ಇತ್ಯರ್ಥಗೊಂಡವು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now