ಚಿತ್ರದುರ್ಗ :  ಭೀಕರ ರಸ್ತೆ ಅಪಘಾತ, ನಾಲ್ವರ ದುರ್ಮರಣ

ಸುದ್ದಿಒನ್, ಚಿತ್ರದುರ್ಗ, (ಡಿ.04) : ರಾಷ್ಟ್ರೀಯ ಹೆದ್ದಾರಿ 4 (48) ರ ದೊಡ್ಡಸಿದ್ದವ್ವನಹಳ್ಳಿ ಬಳಿ ಶನಿವಾರ ಮುಂಜಾನೆ 1:30 ರಿಂದ ಎರಡು ಗಂಟೆ ಸುಮಾರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ.

ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿ ದೊಡ್ಡಸಿದ್ದವ್ವನಹಳ್ಳಿ ಬಳಿ ಪಂಚರ್ ಆಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಗ್ಯಾಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಈರುಳ್ಳಿ ಚೀಲಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ.

ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ತಾಲೂಕಿನ ಮಂಜುನಾಥ,  ವಿಜಯಪುರದ ಲಾರಿ ಕ್ಲೀನರ್ ಸಂಜಯ್, ರೋಣದ ಚಾಲಕ ಶರಣಪ್ಪ ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡ ಗ್ಯಾಸ್ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿದ ತಕ್ಷಣ ಎಸ್ ಪಿ ರಾಧಿಕಾ ಸೇರಿದಂತೆ  ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

Recent Posts

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

6 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…

7 hours ago

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago